ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟ

ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟ

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಹಿರಿಯ ಸಾಹಿತಿ, ಚಿಂತಕ ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿ ಅವರನ್ನು ಡಾ. ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.

ಈ ಕುರಿತು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಎಂ.ಎನ್. ನಂದೀಶ್ ಹಂಚೆ ಹೇಳಿದ್ದಾರೆ. ಕನ್ನಡ ಪುಸ್ತಕ ಪ್ರಾಧಿಕಾರದಿಂದ ನೀಡಲಾಗುವ ಅತ್ಯುತ್ತಮ ಪ್ರಕಾಶನ ಪ್ರಶಸ್ತಿಯನ್ನು ಹುಬ್ಬಳ್ಳಿಯ ಸಾಹಿತ್ಯ ಪ್ರಕಾಶನಕ್ಕೆ ನೀಡಲಾಗಿದೆ. ಡಾ.ಜಿ.ಪಿ.ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿಗೆ ಮೈಸೂರಿನ ಸಯ್ಯದ್ ಇಸಾಕ್ ಅವರನ್ನು ಆಯ್ಕೆ ಮಾಡಲಾಗಿದೆ.

ಡಾ.ಅನುಪಮ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿಯನ್ನು ಡಾ.ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ನೀಡಲಾಗಿದೆ. ಆದರೆ ಡಾ. ಸುಧೀಂದ್ರ ಹಾಲ್ದೊಡ್ಡೇರಿ ನಿಧನರಾದ ಹಿನ್ನೆಲೆಯಲ್ಲಿ ಮರಣೋತ್ತರವಾಗಿ ಪ್ರಶಸ್ತಿ ನೀಡಲಾಗುವುದು.