ನವದೆಹಲಿ: ಫೆ.12 – ಹಿರಿಯ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಅಜಾದ್ ಅವರ ನಿವೃತ್ತಿಯಿಂದಾಗಿ ತೆರವಾಗಿದ್ದ ರಾಜ್ಯಸಭೆ ವಿರೋಧ ಪಕ್ಷದ ಸ್ಥಾನಕ್ಕೆ ಹಿರಿಯ ಮುಖಂಡ ಮಲ್ಲಿಕಾರ್ಜುನಖರ್ಗೆ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಕುರಿತು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯನಾಯ್ಡು ಅವರಿಗೆ ಪಕ್ಷವು ಪತ್ರ ಬರೆದಿದ್ದು, ಪತ್ರದಲ್ಲಿ ಅಜಾದ್ರಿಂದ ತೆರವಾಗಿರುವ ಸ್ಥಾನಕ್ಕೆ ಮಲ್ಲಿಕಾರ್ಜುನಖರ್ಗೆ ಅವರನ್ನು ನೇಮಿಸುವುದಾಗಿ ಪಕ್ಷದ ಮುಖಂಡರು ತಿಳಿಸಿದ್ದಾರೆ.
ಫೆ.15 ರಂದು ಅಜಾದ್ ಅವರ ಅವಧಿ ಮುಗಿಯಲಿದ್ದು ಅಂದೇ ಮಲ್ಲಿಕಾರ್ಜುನ್ಖರ್ಗೆ ಅವರು ವಿಪಕ್ಷ ನಾಯಕ ಸ್ಥಾನವನ್ನು ಅಲಂಕರಿಸುವ ಸಾಧ್ಯತೆಗಳಿವೆ.
ದಲಿತ ಮುಖಂಡ, ಹಿರಿಯ ಕಾಂಗ್ರೆಸ್ಸಿಗರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು 2014 ರಿಂದ 2019ರವರೆಗೆ ಸಂಸದರಾಗಿ ಲೋಕಸಭೆಯನ್ನು ಪ್ರತಿನಿಧಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನ ವಹಿಸಲಿದ್ದಾರೆ.