ಬೆಳಗಾವಿ: ಏ.9 ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರ ತವರು ಜಿಲ್ಲೆಯಲ್ಲೇ ಸಾರಿಗೆ ನೌಕರರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.ಶಿವಕುಮಾರ್ ನೀಲಗಾರ (40) ಆತ್ಮಹತ್ಯೆಗೆ ಶರಣಾದ ನೌಕರ.
ಸವದತ್ತಿಯಲ್ಲಿರುವ ತಮ್ಮ ನಿವಾಸದಲ್ಲಿ ಅವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ.
ಇವರು ಬೆಳಗಾವಿ ಜಿಲ್ಲೆಯ ಸವದತ್ತಿ ಘಟಕದಲ್ಲಿ ಬಸ್ಸು ಚಾಲಕ ಕಂ ನಿರ್ವಾಹಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ವಾಕರಾರಸಾ ಸಂಸ್ಥೆಯ ಧಾರವಾಡ ವಿಭಾಗದ ಸವದತ್ತಿ ಘಟಕದಲ್ಲಿ ಕಳೆದ 12 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರ ಪರ ಪ್ರಚಾರಕ್ಕೆ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸವದತ್ತಿಗೆ ಆಗಮಿಸುತ್ತಿದ್ದಾರೆ. ಈ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಷ್ಕರ ನಿರತ ಸಾರಿಗೆ ನೌಕರರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿದ್ದಾರೆ.