ನವದೆಹಲಿ: ಏಪ್ರಿಲ್ 14 ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಳಳವಾಗುತ್ತಿದ್ದರೂ ಮತ್ತೆ ದೊಡ್ಡ ಮಟ್ಟದಲ್ಲಿ ಲಾಕ್ಡೌನ್ ಮಾಡುವ ಯಾವ ಪ್ರಸ್ತಾವನೆಯಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಸರ್ಕಾರಕ್ಕೆ ಮತ್ತೆ ಲಾಕ್ಡೌನ್ ಮಾಡುವ ಚಿಂತನೆಯಿಲ್ಲ.ಆದರೆ ಸೋಂಕು ಪ್ರಕರಣಗಳು ಹೆಚ್ಚಿರುವ ಕಡೆಯಲ್ಲಿ ಸ್ಥಳೀಯವಾಗಿ ಕಂಟೇನ್ಮೆಂಟ್ ವಲಯ ನಿರ್ಮಾಣ ಮಾಡಿ ನಿಯಂತ್ರಣಕ್ಕೆ ಪರಿಹಾರ ಕಂಡುಕೊಳ್ಳಬಹುದು ಅಷ್ಟೆ ಎಂದರು.
ವರ್ಲ್ಡ್ ಬ್ಯಾಂಕ್ ಗ್ರೂಪ್ ಅಧ್ಯಕ್ಷ ಡೇವಿಡ್ ಮಾಲ್ಪಾಸ್ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ಸಚಿವರು, ದೇಶದ ಅಭಿವೃದ್ಧಿಗೆ ಹಣಕಾಸು ಲಭ್ಯತೆ ಹೆಚ್ಚಿಸುವಲ್ಲಿ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ ತೆಗೆದುಕೊಂಡ ಕ್ರಮಗಳನ್ನು ಶ್ಲಾಘಿಸಿದರು. ಕೊರೊನಾ ಎರಡನೇ ಅಲೆಯಲ್ಲಿ ಸೋಂಕಿನ ತಡೆಗೆ ಟೆಸ್ಟ್-ಟ್ರ್ಯಾಕ್-ಟ್ರೀಟ್-ವ್ಯಾಕ್ಸಿನೇಷನ್ ಹಾಗೂ ಕೊರೊನಾ ನಿಯಮವಾವಳಿ ಸೇರಿದಂತೆ ದೇಶ ಈವರೆಗೆ ಕೈಗೊಂಡ ಕ್ರಮಗಳನ್ನು ಸಚಿವರು ಟ್ವೀಟ್ ಮೂಲಕ ವಿವರಿಸಿದ್ದಾರೆ.
ದೇಶದಲ್ಲಿ ದೊಡ್ಡ ಮಟ್ಟದಲ್ಲಿ ಲಾಕ್ಡೌನ್ ಹೇರಿ ಆರ್ಥಿಕತೆ ಮೇಲೆ ಸೋಂಕಿನಪರಿಣಾಮ ಬೀರಲು ಬಿಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ದೇಶದಲ್ಲಿ ಕಳದ ಒಂದು ವಾರದಿಂದಲೂ ಹೊಸ ಪ್ರಕರಣಗಳ ಸಂಖ್ಯೆ ನಿತ್ಯವೂ ಒಂದೂವರೆ ಲಕ್ಷದ ಗಡಿ ದಾಟುತ್ತಿರುವುದು ಬಹಳ ಆತಂಕ ತಂದಿಟ್ಟಿದೆ.