ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಳಗಾವಿಯ ಚಿಕ್ಕಬಾಗೇವಾಡಿಯಲ್ಲಿ ಬಾಬಾಗೌಡ ಪಾಟೀಲ್ ಅವರ ನಿವಾಸಕ್ಕೆ ಗುರುವಾರ ಭೇಟಿ ಮಾಡಿ, ಮಾತುಕತೆ ನಡೆಸಿದರು.
ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ, ಕಾಂಗ್ರೆಸ್ ವರಿಷ್ಠ ರಾಹುಲ ಗಾಂಧಿ ಸೇರಿದಂತೆ ಎಲ್ಲ ನಾಯಕರ ಸೂಚನೆಯಂತೆ ಬಾಬಾಗೌಡ ಪಾಟೀಲ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ನಮ್ಮ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕೋರಿದ್ದೇನೆ ಎಂದರು.
ಬಾಬಾಗೌಡ ಪಾಟೀಲ ಮಾತನಾಡಿ, ಬಿಜೆಪಿಗೆ ಯಾವುದೇ ಕಾರಣದಿಂದ ಮತ ಹಾಕುವುದಿಲ್ಲ. ಬಿಜೆಪಿಯನ್ನು ಆದಷ್ಟು ಬೇಗ ಕಿತ್ತು ಹಾಕುವುದೇ ನಮ್ಮ ಗುರಿ ಎಂದರು.
ಕೇಂದ್ರದ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ , ಕಾಂಗ್ರೆಸ್ ಕಿಸಾನ್ ಘಟಕದ ರಾಜ್ಯಾಧ್ಯಕ್ಷ ಸಚಿನ್ ಮೀಗಾ ಹಾಜರಿದ್ದರು.