The news is by your side.

ನಿಲಜಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ

ಬೆಳಗಾವಿ:; ಬೆಳಗಾವಿ ಗ್ರಾಮೀಣ ಕ್ಷೇತ್ರದ ನಿಲಜಿ ಗ್ರಾಮದ ಕೆರೆಯ ಅಭಿವೃದ್ಧಿಗೆ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಒಟ್ಟು ಒಂದು ಕೋಟಿ ಐವತ್ತು ಲಕ್ಷ ರೂ,ಗಳ ವೆಚ್ಚದಲ್ಲಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಗಳಾದ ವಾಕಿಂಗ್ ಟ್ರ್ಯಾಕ್, ಗಣೇಶ ವಿಸರ್ಜನೆಯ ಸಲುವಾಗಿ ಪ್ರತ್ಯೇಕ ಟ್ಯಾಂಕ್ ನಿರ್ಮಾಣ, ವಾಶಿಂಗ್ ಸೌಲಭ್ಯ ಹಾಗೂ ಮುಂತಾದ ಅಭಿವೃದ್ಧಿಯ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ನೀಡಿದರು.

ಈ ಎಲ್ಲ ಕಾಮಗಾರಿಗಳು ಒಳ್ಳೆಯ ಗುಣಮಟ್ಟತೆಯಿಂದ ಕೂಡಿರಬೇಕೆಂದು ಸಂಬಂಧಪಟ್ಟವರಿಗೆ ಸೂಚನೆಯನ್ನು ನೀಡಿದ್ದೇನೆ ಎಂದು ಅವರು ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಕಾಮಗಾರಿಗಳ ಚಾಲನೆಯ ಸಂದರ್ಭದಲ್ಲಿ ಗ್ರಾಮದ ಗುರು ಹಿರಿಯರು, ಗ್ರಾಮಸ್ಥರು, ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರು, ಸದಸ್ಯರು, ನಾಗೇಶ್ ದೇಸಾಯಿ, ಚಾಯಪ್ಪ ಕಾಕಾ, ದೀಪಕ್, ಮಾಧುರಿ, ನಿಂಗಪ್ಪ ಹಾಗೂ ಮುಂತಾದವರು ಉಪಸ್ಥಿತರಿದ್ದರು.

- Advertisement -

Leave A Reply

Your email address will not be published.