The news is by your side.

ಸಿ ಎಂ ಗೆ ಸಮನ್ಸ ನೀಡಿದ ಗೋಕಾಕ ಕೋರ್ಟ್

ಗೋಕಾಕ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೋಕಾಕ ಸಿವಿಲ್ ಜಡ್ಜ್ ಜೆಎಂಎಫ್‍ಸಿ ಕೋರ್ಟ್ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ.

ಗೋಕಾಕ ಉಪ ಚುನಾವಣೆಯಲ್ಲಿ ದಾಖಲಾದ ಚುನಾವಣಾ ನೀತಿ ಸಂಹಿತೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 1 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಗೋಕಾಕ ಉಪ ಚುನಾವಣೆಯಲ್ಲಿ ವೀರಶೈವ ಲಿಂಗಾಯತರು ಬಿಜೆಪಿಗೆ ಮತ ಹಾಕಬೇಕೆಂದು, ಚುನಾವಣಾ ಪ್ರಚಾರದ ಸಭೆಯಲ್ಲಿ ಮತಯಾಚಿಸಿದ್ದರು. ಜಾತಿ ಹೆಸರಿನಲ್ಲಿ ಮತಯಾಚನೆ ಮಾಡಿದ್ದಾರೆ ಎಂದು ಆರೋಪಿಸಿ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣ ಗೋಕಾಕ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಭಂಧಿಸಿದಂತೆ ಗೋಕಾಕ್ ಪೆÇಲೀಸ್ ಠಾಣೆಯಿಂದ ನ್ಯಾಯಾಲಯದಲ್ಲಿ ಬಿ ರಿಪೆÇೀರ್ಟ್ ಸಲ್ಲಿಕೆಯಾಗಿತ್ತು. ಆದರೆ ನ್ಯಾಯಾಲಯ ಇದನ್ನು ತಿರಸ್ಕರಿಸಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಸೆಪ್ಟೆಂಬರ್ 1ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

- Advertisement -

Leave A Reply

Your email address will not be published.