ಬೆಳಗಾವಿ -ಅಭಿನವ ಶಿವಪುತ್ರ ಮಹಾಸ್ವಾಮಿಗಳು, ಷಣ್ಮುಖಾರೂಢ ಮಠ ವಿಜಯಪುರ ಇವರು ಹೃದಯಾಘಾತದಿಂದ ಶುಕ್ರವಾರ ರಾತ್ರಿ 8:30 ಕ್ಕೆ ಲಿಂಗೈಕ್ಯರಾಗಿದ್ದಾರೆ.
ನಗರದ ಕೆಎಲ್ಇ ಆಸ್ಪತ್ರೆಗೆ ಇಂದು ಸಂಜೆ ದಾಖಲಾಗಿದ್ದ ಶ್ರೀಗಳು ಚಿಕಿತ್ಸೆ ಫಲಿಸದೇ ಲಿಂಗೈಕ್ಯರಾದರು.
ಕಳೆದ ಎರಡು ದಿನಗಳಿಂದ ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಹೆಚ್ಚಿನ ಚಿಕಿತ್ಸೆಗೆ ಇಂದು ಸಂಜೆ ಕೆ.ಎಲ್.ಇ ಆಸ್ಪತ್ರೆಗೆ ಕರೆತರಲಾಗಿದ್ದು, ಫಲಕಾರಿಯಾಗದೇ ಲಿಂಗೈಕ್ಯರಾದರು ಎಂದು ಶ್ರೀಮಠದ ಉತ್ತರಾಧಿಕಾರಿಗಳಾದ ಅಭಿನವ ಸಿದ್ಧಾರೂಢ ಸ್ವಾಮೀಜಿಯವರು ತಿಳಿಸಿದ್ದಾರೆ.
