The news is by your side.

575 ಹೊಸ ಕೇಸ್: ನಾಲ್ಕು ಸಾವು: ಇದು ಬೆಳಗಾವಿ ಲೆಕ್ಕ

ಬೆಳಗಾವಿ : ಇಂದು ಕೂಡ ಮಹಾಮಾರಿ ಕೊರೊನಾ ರಣಕೇಕೆ ಹಾಕಿದ್ದು ಬೆಳಗಾವಿ ಜಿಲ್ಲೆಯಲ್ಲಿ ಹೊಸದಾಗಿ 575 ಜನರಿಗೆ ಕೊರೊನಾ ಸೋಂಕು ಹರಡಿದೆ. 4 ಬಲಿಯಾಗಿದ್ದಾರೆ.

ಜಿಲ್ಲಾ ಆರೋಗ್ಯ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ 575 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6022 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಸೋಂಕು ರಾಜ್ಯದಲ್ಲಿಂದು 6257 ಪ್ರಕರಣಗಳು ಪತ್ತೆಯಾಗಿದ್ದು 86 ಮಂದಿ ಬಲಿಯಾಗಿದ್ದಾರೆ ಎಂದು ಹೇಳಲಾಗಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 6257 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 188611ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು 86 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 3398 ಕ್ಕೆ ಏರಿಕೆಯಾಗಿದೆ.

- Advertisement -

Leave A Reply

Your email address will not be published.