The news is by your side.

ಕೊರೊನಾ ಲಸಿಕೆ ರೆಡಿ: ನಾವೇ ಫಸ್ಟ್ ಎಂದ ಪುಟಿನ್

ಮಾಸ್ಕೋ: ಕೋವಿಡ್‌19 ಲಸಿಕೆಯನ್ನು ಫೈನಲ್ ಮಾಡಿರುವುದಾಗಿ ರಷ್ಯಾ ಘೋಷಿಸಿದೆ.
ಈ ಬಗ್ಗೆ ಸ್ವತಃ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಮಾಹಿತಿ ನೀಡಿದ್ದು, ರಷ್ಯಾದಲ್ಲಿ ಅಭಿವೃದ್ಧಿ ಪಡಿಸಲಾಗಿರುವ ಕೋವಿಡ್‌19 ಲಸಿಕೆ ಜನರ ಬಳಕೆಗೆ ಬಿಡುಗಡೆಯಾಗಲಿದೆ.

ಜಗತ್ತಿನ ಮೊಟ್ಟ ಮೊದಲ ಕೊರೋನಾ ಲಸಿಕೆ ರಷ್ಯಾದಿಂದ ನೋಂದಣಿಯಾಗಿದ್ದು, ಸ್ವತಃ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಪುತ್ರಿಗೆ ಲಸಿಕೆ ಪ್ರಯೋಗ ಮಾಡಲಾಗಿದೆ.

ರಷ್ಯಾದ ಆರೋಗ್ಯ ಸಚಿವಾಲಯ ಅಗತ್ಯವಿರುವ ಎಲ್ಲ ಅನುಮೋದನೆಗಳನ್ನು ನೀಡಿದ್ದು, ಆ ಮೂಲಕ ಜಗತ್ತಿನ ಮೊದಲ ಕೋವಿಡ್‌- 19 ಲಸಿಕೆ ಮಂಗಳವಾರ ಅಧಿಕೃತವಾಗಿ ನೋಂದಣಿಯಾಗಿದೆ ಎಂದು ಹೇಳಿದ್ದಾರೆ.

ದೇಶದಲ್ಲಿ ಅಭಿವೃದ್ಧಿ ಪಡಿಸಲಾಗಿರುವ ಕೊರೊನಾ ವೈರಸ್‌ ಲಸಿಕೆಯನ್ನು ಬಳಕೆಗೆ ನೋಂದಾಯಿಸಲಾಗಿದೆ ಹಾಗೂ ಒಬ್ಬಳು ಮಗಳಿಗೆ ಆಗಲೇ ಲಸಿಕೆ ನೀಡಲಾಗಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಹೇಳಿದ್ದಾರೆ.

- Advertisement -

Leave A Reply

Your email address will not be published.