The news is by your side.

ಬೆಳಗಾವಿ 314 ಜನರಿಗೆ ಪಾಸಿಟಿವ್, 6 ಸಾವು

 

ಬೆಳಗಾವಿ : ಕೊರೋನಾ ಸೋಂಕು ಇಂದು ಬುಧುವಾರ 314 ಜನರನ್ನು ವ್ಯಾಪಿಸಿಕೊಂಡಿದೆ, ಸೋಂಕಿನಿಂದ ಬಳಲುತ್ತಿದ್ದ 6 ಜನ ಅಸುನೀಗಿದ್ದು ಒಟ್ಟು ಬಲಿಯಾದವರ ಸಂಖ್ಯೆ 107 ಕ್ಕೇರಿದೆ.

ಜಿಲ್ಲಾ ಆರೋಗ್ಯ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನ ಪ್ರಕಾರ 314 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6352ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 6 ಜನರು ಸಾವನ್ನಪ್ಪಿದ್ದು, ಈವರೆಗೆ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 107ಕ್ಕೆ ಏರಿಕೆಯಾಗಿದೆ.

ಇಂದು ಜಿಲ್ಲೆಯಲ್ಲಿ 148 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 2745 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಧ್ಯ ಜಿಲ್ಲೆಯ ವಿವಿಧ ಕೋವಿಡ್ ಸೆಂಟರ್‍ಗಳಲ್ಲಿ 3484 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Shree Panjurlli Fine Dine ADD

- Advertisement -

Leave A Reply

Your email address will not be published.