The news is by your side.

Mahant Nritya Gopal Das, Chief of Ram Janmabhoomi Trust, tests Covid-19 positive, shared stage with PM Modi

ಶ್ರೀ ರಾಮ ಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್ ಹಾಗೂ ಕೃಷ್ಣ ಜನ್ಮ ಭೂಮಿ ನ್ಯಾಸ್ ಮುಖ್ಯಸ್ಥರಾದ ನೃತ್ಯ ಗೋಪಾಲ ದಾಸ್ ಅವರಿಗೆ ಕೊರೋನಾ ಪಾಸಿಟಿವ್

ಹೊಸದಿಲ್ಲಿ: ಶ್ರೀ ರಾಮ ಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್ ಹಾಗೂ ಕೃಷ್ಣ ಜನ್ಮ ಭೂಮಿ ನ್ಯಾಸ್ ಮುಖ್ಯಸ್ಥರಾದ ನೃತ್ಯ ಗೋಪಾಲ ದಾಸ್ ಅವರಿಗೆ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಯಾಗಿದೆ.ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆಯಲ್ಲಿ ಅವರು ಪಾಲ್ಗೊಂಡಿದ್ದರು.
ಕೋಟ್ಯಾಂತ ಭಾರತೀಯರ ಕನಸಾಗಿದ್ದ ಅಯೋಧ್ಯೆ ರಾಮಮಂದಿರದ ಭೂಮಿ ಪೂಜೆ ಆಗಸ್ಟ್ 5 ರಂದು ನೆರವೇರಿಸಲಾಗಿತ್ತು. ಕಾರ್ಯಕ್ರಮದಲ್ಲಿ ಐವರು ಪ್ರಮುಖ ನಾಯಕರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಐವರಲ್ಲಿ ಮಹಂತ್ ನೃತ್ಯ ಗೋಪಾಲ್ ದಾಸ್ ಕೂಡ ಒಬ್ಬರಾಗಿದ್ದರು.

ಕಾರ್ಯಕ್ರಮದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯಪಾಲೆ ಆನಂದಿ ಬೆನ್ ಪಟೇಲ್, ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಪ್ರಧಾನಿ ಮೋದಿಯವರು ಭಾಗಿಯಾಗಿದ್ದರು. ಇದೀಗ ಮಹಂತ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಈ ನಡುವೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೂ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ತ್ವರಿಗತಿ ವೈದ್ಯಕೀಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆಂದು ತಿಳಿದುಬಂದಿದೆ.

Shree Panjurlli Fine Dine ADD

- Advertisement -

Leave A Reply

Your email address will not be published.