The news is by your side.

ಕಾರ ಅಪಘಾತ : ಒಂದು ಸಾವು

ಧಾರವಾಡ : ಕಾರ ಒಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಸಾವನ್ನಪ್ಪಿದ್ದು ,ನಾಲ್ಕು ಜನರಿಗೆ ಗಂಭೀರ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ಸಮೀಪದ ಅದರಗುಂಚಿಯ ಹೈವೇ ಯಲ್ಲಿ
ನಡೆದಿದೆ.

ಸೇಲಂ‌ನಿಂದ ಮುಂಬೈಗೆ ತೆರಳುತ್ತಿದ್ದ ಕಾರು ರಸ್ತೆ ಪಕ್ಕ ನಿಲ್ಲಿಸಿದ ಲಾರಿಗೆ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ, ಅಯ್ಯನಾರ್(35) ವ್ಯಕ್ತಿ ಮೃತಪಟ್ಟಿದ್ದು, ಅಪಘಾತ ನಡೆದ ಸ್ಥಳದಲ್ಲಿನ ಜನರಿಂದ ಕಾರಿನ ಗ್ಲಾಸ್ ಒಡೆದು ಕಾರಿನಲ್ಲಿದ್ದ ನಾಲ್ಕು ಜನರನ್ನು ರಕ್ಷಣೆ ಮಾಡಿ, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ರು ಭೆಟ್ಟಿ ನೀಡಿದ್ದಾರೆ.

Shree Panjurlli Fine Dine ADD

- Advertisement -

Leave A Reply

Your email address will not be published.