The news is by your side.

ಹಿಂದೂ ಸಂಘಟನೆ ಗಳಿಂದ ಪ್ರತಿಭಟನೆ: ಪೋಲಿಸ್, ಪತ್ರಕರ್ತ ರಿಗೆ ಬೆಂಬಲ

ಬೆಳಗಾವಿ: ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಕಾರ್ಯಕರ್ತರು ಇಂದು  ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ
ರಾಜ್ಯದಲ್ಲಿ ಹಿಂದೂ ಸಮಾಜವನ್ನು ಹತ್ತಿಕ್ಕುವ ಷಡ್ಯಂತ್ರ ನಡೆದಿದ್ದು, ಸಮಾಜಘಾತುಕ ಕೃತ್ಯಗಳಲ್ಲಿ ಪಾಲ್ಗೊಳ್ಳುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಅವರು ಪೊಲೀಸ್ ಮತ್ತು ಪತ್ರಕರ್ತರಿಗೆ ನೈತಿಕ ಬೆಂಬಲ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಮೂಲಕ ಅವರು ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಜೈ ಶ್ರೀರಾಮ್ ಘೋಷಣೆ ಮೊಳಗಿಸಿದರು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್‍ನ ಮುಖಂಡ ಕೃಷ್ಣ ಭಟ್ ಮಾತನಾಡಿ, ರಾಜ್ಯದಲ್ಲಿ ವ್ಯವಸ್ಥಿತವಾಗಿ ಕೋಮು ಗಲಭೆಗಳನ್ನು ಸೃಷ್ಟಿಸುವ ಹುನ್ನಾರ ನಡೆದಿದೆ. ಇದಕ್ಕೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಯೋಜನಾ ಬದ್ಧ ಷಡ್ಯಂತ್ರದ ಭಾಗವಾಗಿ ಬೆಂಗಳೂರಿನ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿಯಲ್ಲಿ ಗಲಭೆ, ಗಲಾಟೆಗಳು ನಡೆದಿವೆ. ಹಿಂದೂ ಸಮಾಜವನ್ನು ಹತ್ತಿಕ್ಕುವ ಈ ಹುನ್ನಾರವನ್ನು ವಿಫಲಗೊಳಿಸಲು ನಾವು ಬದ್ಧರಾಗಿದ್ದೇವೆ. ಪೊಲೀಸರು ಮತ್ತು ಪತ್ರಕರ್ತರಿಗೆ ನೈತಿಕ ಬೆಂಬಲ ಘೋಷಿಸುತ್ತೇವೆ. ಸರ್ಕಾರ ಗೂಂಡಾಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Shree Panjurlli Fine Dine ADD

- Advertisement -

Leave A Reply

Your email address will not be published.