ಬೆಳಗಾವಿ:: ಕೋವಿಡ್ ಹೆಸರಿನಲ್ಲಿ ವರ್ಷಗಳ ಸಂಪ್ರದಾಯದ ಸಾರ್ವಜನಿಕ ಗಣೇಶೋತ್ಸವವನ್ನು
ಸರ್ಕಾರ ಮುರಿಯುವ ಪ್ರಯತ್ನ ಮಾಡುತ್ತಿರುವುದನ್ನು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಖಂಡಿಸಿದ್ದಾರೆ.
ಸಾರ್ವಜನಿಕ ಗಜಾನನ ಮಂಡಳಿ, ಮೂರ್ತಿ ತಯಾರಕರು ಸಾರ್ವಜನಿಕರು ಅಗಸ್ಟ್ 17 ರಂದು ರಾಜ್ಯಾದ್ಯಂತ ಹಿಂದೂ ಸಂಘಟನೆಗಳು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿ ಎದುರು ಗಣೇಶ ಮೂರ್ತಿಯನ್ನಿಟ್ಟು ಧರಣಿ ನಡೆಸಲಾಗುವುದು ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ದೇಶದಲ್ಲಿ ಕೆಂಪು ಮುಖದ ಬ್ರೀಟಿಷರ ವಿರುದ್ಧ ಹೋರಾಟ ಮಾಡಲು ಬಾಲಗಂಗಾಧರ ತಿಲಕ್ ಅವರು ಸಾರ್ವಜನಿಕ ಗಣೇಶೋತ್ಸವ ಆಚರಣೆ ಪ್ರಾರಂಭ ಮಾಡಿ ಎಲ್ಲರನ್ನೂ ಒಟ್ಟಾಗಿ ಸೇರುವಂತೆ ಮಾಡಿದ್ದಾರೆ. ಇದಕ್ಕೆ ಸುದೀರ್ಘವಾದ ಇತಿಹಾಸವಿದೆ. ಇಂತಹ ಸಂಪ್ರದಾಯದ ಹಬ್ಬವನ್ನು ಬಿಜೆಪಿ ಸರ್ಕಾರ ಕೋವಿಡ್ ಹೆಸರಿನಲ್ಲಿ ಬಂದ್ ಮಾಡಲು ಹೊರಟಿರುವುದು ಖಂಡನೀಯ ಎಂದರು.
