The news is by your side.

ಅನ್ನ ತಿನ್ನುವ ಜನಪ್ರತಿನಿಧಿಗಳೇ ಮಣ್ಣು ತಿನ್ನಲು ಹೋಗಬೇಡಿ’ ಎಂದ ರೈತ ಸಂಘಟನೆ

ಬಳಗಾವಿ::ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಿ,ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ರೈತರಿಗೆ ಮರಣಶಾಸನವಾಗಿದ್ದು, ಅದನ್ನು ಕೂಡಲೇ ರದ್ದುಪಡಿಸಬೇಕೆಂದು ಆಗ್ರ ಹರಸಿದರು.ಕೇಂದ್ರ ಸಚಿವ ಸುರೇಶ ಅಂಗಡಿ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.

ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಕೂಡಲೇ ರದ್ದುಪಡಿಸಬೇಕೆಂದು ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು, ಮುಖಂಡರು ಇಂದು ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅನ್ನ ತಿನ್ನುವ ಜನಪ್ರತಿನಿಧಿಗಳೇ ಮಣ್ಣು ತಿನ್ನಲು ಹೋಗಬೇಡಿ ಎಂದು ಘೋಷಣೆ ಮೊಳಗಿಸಿದರು.

- Advertisement -

Leave A Reply

Your email address will not be published.