The news is by your side.

ಸಾರ್ವಜನಿಕ ಗಣೇಶೋತ್ಸವ ಕ್ಕೆ ಬ್ರೆಕ್:ಹೊಸ ಗೈಡಲೈನ್ಸ ಜಾರಿ

 

ಬೆಂಗಳೂರು:: ಸಾರ್ವಜನಿಕ ಗಣೇಶೋತ್ಸವ ಕ್ಕೆ ಬ್ರೆಕ್ ಹಾಕಿರುವ ರಾಜ್ಯ ಸರ್ಕಾರ ಈ ಸಂಬಂಧ ಶುಕ್ರವಾರ ಅಧಿಕೃತ ಆದೇಶ ಹೊರಡಿಸಿದೆ.

ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್‍ಭಾಸ್ಕರ್ ಅವರು 10 ಮಹತ್ವದ ನಿಬಂಧನೆಗಳನ್ನು ಸೂಚಿಸಿದ್ದಾರೆ.
1) ಗಣೇಶ ಚತುರ್ಥಿಯನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನ ಅಥವಾ ತಮ್ಮ ಮನೆಯಲ್ಲಿಯೇ ಆಚರಿಸುವುದು.
2) ರಸ್ತೆ, ಗಲ್ಲಿ, ಓಣಿ, ಮೈದಾನ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಬಾರದು.
3) ಯಾವುದೇ ಕಾರಣಕ್ಕೂ ಸಾರ್ವಜನಿಕ ನದಿ, ಕೆರೆ, ಕೊಳ, ಬಾವಿ ಮತ್ತು ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮಾಡುವಂತಿಲ್ಲ.
4) ಗಣೇಶ ಮೂರ್ತಿ ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕೂ ಅಥವಾ ಯಾವುದೇ ಸಂದರ್ಭಗಳಲ್ಲಿ ಯಾವುದೇ ರೀತಿ ಮೆರವಣಿಗೆ ಹೊರಡಿಸುವಂತಿಲ್ಲ.
5) ಮನೆಯಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು ಅವರ ಮನೆ ಆವರಣದಲ್ಲಿಯೇ ವಿಸರ್ಜನೆ ಮಾಡುವುದು.
6) ಗಣೇಶ ಹಬ್ಬ ಆಚರಿಸುವ ದೇವಸ್ಥಾನಗಳಲ್ಲಿ ಪ್ರತಿನಿತ್ಯ ಸ್ಯಾನಿಟೈಸೇಶನ್, ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸಬೇಕು. ಅದೇ ರೀತಿ ಭಕ್ತರಿಗೆ ಕನಿಷ್ಠ 6 ಅಡಿ ಸಾಮಾಜಿಕ ಅಂತರ ಮತ್ತು ಮಾಸ್ಕ್ ಕಡ್ಡಾಯವಾಗಿ ಮಾಸ್ಕ್ ಧರಿಸಕ್ಕದ್ದು.
7) ಈ ಎಲ್ಲಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಅಲ್ಲದೇ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಸೇರಿ ಇತರೆ ಇಲಾಖೆಗಳಿಂದ ಹೊರಡಿಸುವ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.
8) ಇನ್ನು ಗಣೇಶೋತ್ಸವ ಆಚರಣೆ ಕಾಲಕ್ಕೆ ಸಂದರ್ಭದಲ್ಲಿ ಸರ್ಕಾರ, ಜಿಲ್ಲಾಡಳಿತ, ಪೊಲೀಸ್, ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ/ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ ಮತ್ತು ಸೂಚನೆಗಳನ್ನೂ ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.
9) ಹಬ್ಬ ಹರಿದಿನಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕ ಆಗಿರುವುದರಿಂದ ಗಣೇಶೋತ್ಸವವನ್ನು ಅದೇ ರೀತಿ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡಬೇಕು.
10) ಅದೇ ರೀತಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸೂಚಿಸಿದ್ದಾರೆ.

Shree Panjurlli Fine Dine ADD

- Advertisement -

Leave A Reply

Your email address will not be published.