The news is by your side.

358 ಹೊಸ ಕೇಸ್: 5 ಸಾವು: ಇದು ಬೆಳಗಾವಿ ಕೊರೊನಾ ಲೆಕ್ಕ

 

ಬೆಳಗಾವಿ:: ಜಿಲ್ಲಾ ಆರೋಗ್ಯ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್ ಪ್ರಕಾರ 358 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 7332ಕ್ಕೆ ಏರಿಕೆಯಾಗಿದೆ. ಇನ್ನು ಇಂದು ಜಿಲ್ಲೆಯಲ್ಲಿ ಕೊರೊನಾದಿಂದ 5 ಜನರು ಸಾವನ್ನಪ್ಪಿದ್ದು. ಈವರೆಗೆ ಕೊರೊನಾದಿಂದ ಬಲಿಯಾದವರ ಸಂಖ್ಯೆ 118ಕ್ಕೆ ಏರಿಕೆಯಾಗಿದೆ. ಈವರೆಗೆ 3510 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಧ್ಯ ಜಿಲ್ಲೆಯ ವಿವಿಧ ಕೋವಿಡ್ ಸೆಂಟರ್‍ಗಳಲ್ಲಿ 3704 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 818 ಜನರ ಕೊರೊನಾ ರಿಪೋರ್ಟ್ ಬರಬೇಕಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

- Advertisement -

Leave A Reply

Your email address will not be published.