The news is by your side.

ಕಂಟೇನರ್ ಲಾರಿ ಹಾಯ್ದು ಬೈಕ್ ಸವಾರರ ಸಾವು

 

ಹುಕ್ಕೇರಿ :: ಕಂಟೇನರ್ ಲಾರಿ ಹಾಗೂ ದ್ವಿಚಕ್ರವಾಹನದ ನಡುವೆ ಸೋಮವಾರ ಮಧ್ಯಾಹ್ನ ತಾಲೂಕಿನ ಕಣಗಲಾ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಮೇಲೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಮಧ್ಯಾಹ್ನ 1 ಗಂಟೆಯ ಸುಮಾರು ಈ ಅಪಘಾತ ನಡೆದಿದೆ.
ಮೃತರು ಉತ್ತರ ಪ್ರದೇಶ ಅಥವಾ ಬಿಹಾರ ಮೂಲದವರಾಗಿದ್ದು ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಅವರ ಹೆಸರು ಇನ್ನು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಸಂಕೇಶ್ವರ ಪಿಎಸ್‍ಐ ಗಣಪತಿ ಕೊಂಗನೊಳಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಂಕೇಶ್ವರ ಪೆÇಲೀಸ ಠಾಣೆಯಲ್ಲಿ ಪ್ರಕಾರಣ ದಾಖಲಾಗಿದೆ.

- Advertisement -

Leave A Reply

Your email address will not be published.