The news is by your side.

ಕೊರೊನಾ: 395 ಪಾಸಿಟಿವ್: 7 ಸಾವು: ಸುಧಾರಿಸದ ಬೆಳಗಾವಿ ಸ್ಥಿತಿ

 

ಬೆಳಗಾವಿ: ಮಂಗಳವಾರ ಜಿಲ್ಲಾ ಆರೋಗ್ಯ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ಲ್ಲಿ ಮತ್ತೆ 395 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 8376ಕ್ಕೆ ಏರಿಕೆಯಾಗಿದೆ. ಅದೇ ರೀತಿ ಇಂದು ಏಳು ಜನರನ್ನು ಕಿಲ್ಲರ್ ಕೊರೊನಾ ಬಲಿ ಪಡೆದುಕೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 137ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾದಿಂದ 4658 ಜನರು ಗುಣಮುಖರಾಗಿದ್ದು. ಇನ್ನು 3581 ಸೋಂಕಿತರು ಜಿಲ್ಲೆಯ ವಿವಿಧ ಕೋವಿಡ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೇ ರೀತಿ ಇನ್ನು 465 ಜನರ ಕೊರೊನಾ ರಿಪೋರ್ಟ್ ಬರಬೇಕಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

- Advertisement -

Leave A Reply

Your email address will not be published.