ಖಾನಾಪುರ:: ನಂದಗಡ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಗ್ರಾಮ ಪಂಚಾಯಿತಿ ಮುಖಾಂತರ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿ,
ಪಿರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ತೆರವುಗೊಳಿಸಿದ್ದನ್ನು ಖಂಡಿಸಿ ಮತ್ತು ಅದೇ ಸ್ಥಳದಲ್ಲಿ ಮರುಸ್ಥಾಪನೆಗೆ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಕರವೇ ತಾಲೂಕಾ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ತಹಶೀಲ್ದಾರ ಮಾತನಾಡಿ, ಪೀರನವಾಡಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ತೆರವುಗೊಳಿಸಿರುವುದನ್ನು ನಾವು ಖಂಡಿಸುತ್ತೇವೆ. ತಕ್ಷಣ ಆ ಸ್ಥಳದಲ್ಲೇ ರಾಯಣ್ಣನ ಮೂರ್ತಿ ಸ್ಥಾಪಿಸಬೇಕು ಈಗಾಗಲೇ ನಮ್ಮ ರಾಜ್ಯಾಧ್ಯಕ್ಷರು ಹತ್ತು ದಿನಗಳ ಕಾಲ ಗಡುವು ನೀಡಿದ್ದಾರೆ. ಇಲ್ಲವಾದರೆ ನಾವು ರಾಜ್ಯಾದ್ಯಂತ ಎಲ್ಲ ಕಾರ್ಯಕರ್ತರು ಪೀರನವಾಡಿ ಗ್ರಾಮಕ್ಕೆ ಹೋಗಿ ರಾಯಣ್ಣ ಮೂರ್ತಿ ಸ್ಥಾಪಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಗ್ರಾಮ ಪಂಚಾಯಿತಿ ಕ್ಲಾರ್ಕ್ ಸುನೀಲ್ ಶೆಟ್ಟಿ ಮನವಿ ಸ್ವೀಕರಿಸಿ ಕೂಡಲೇ ಮೇಲಾಧಿಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು.
