The news is by your side.

ನಂದಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮ ಸಾರಾಯಿ ಮಾರಾಟ ಆರೋಪ

 

ಗೋಕಾಕ್ : ನಂದಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವಂತಹ ನಾಲ್ಕು ಗ್ರಾಮಗಳಲ್ಲಿ ಅಕ್ರಮ ಸಾರಾಯಿ ಮಾರಾಟ ತಡೆಯುವಂತೆ ಅನೇಕ ಬಾರಿ ಅಬಕಾರಿ, ಗ್ರಾಮ ಪಂಚಾಯಿತಿ, ಪೊಲೀಸ್ ಇಲಾಖೆಗೆ ಮನವಿ ಮಾಡಿಕೊಂಡರೂ ಸಹ ಸ್ಪಂಧಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿ ರೈತ ಸಂಘಟನೆಗಳು ಇಂದಿಲ್ಲಿ ಪ್ರತಿಭಟನೆ ನಡೆಸಿದವು.
ಅಕ್ರಮ ಸಾರಾಯಿ ಮಾರಾಟ ಗ್ರಾಮಗಳಲ್ಲಿ ಎಗ್ಗಿಲ್ಲದೆ
ನಡೆದಿದೆ. ಅನೇಕ ಕುಟುಂಬಗಳು ಬೀದಿ ಬರುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಆದ ಕಾರಣ ತಕ್ಷಣ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮೇಲ್ನೋಟಕ್ಕೆ ನೋಡಿದ್ರೆ ಅಧಿಕಾರಿಗಳು ಸಹ ಇದರಲ್ಲಿ ಶಾಮಿಲಾಗಿದ್ದಾರೆ ಎಂಬ ಅನುಮಾನ ಮೂಡುತ್ತಿದೆ. ಕ್ರಮ ಕೈಗೊಳ್ಳುವವರೆಗೂ ಧರಣಿ ಸತ್ಯಾಗ್ರಹ ಮುಂದುವರೆಸುತ್ತಿವೆ ಎಂದರು.
ಇಲ್ಲಿನ ಅಬಕಾರಿ ಕಚೇರಿಯ ಮುಂದೆ ಪ್ರತಿಭಟನೆ ಮಾಡಿದರು.

Shree Panjurlli Fine Dine ADD

- Advertisement -

Leave A Reply

Your email address will not be published.