The news is by your side.

379 ಹೊಸ ಕೇಸ್: 3 ಸಾವು : ಇದು ಬೆಳಗಾವಿ ಕೊರೊನಾ ಕಥೆ

ಬೆಳಗಾವಿ : ಜಿಲ್ಲೆಯಲ್ಲಿ ಹೊಸದಾಗಿ ಬರೊಬ್ಬರಿ 379 ಜನರಿಗೆ ಕೊರೊನಾ ಸೋಂಕು ಹರಡಿದೆ. ಇಂದು 3 ಮಂದಿ ಮೃತಪಟ್ಟಿದ್ದಾರೆ. ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 8739 ಕ್ಕೆ ಏರಿಕೆಯಾಗಿದೆ.

ಕರ್ನಾಟಕದಲ್ಲಿ ಇಂದು ಕೊರೋನಾ ರೌದ್ರಾವತಾರ ಮುಂದುವರೆಸಿದ್ದು ಇಂದು ರಾಜ್ಯದಲ್ಲಿ 8642 ಪ್ರಕರಣ ಪತ್ತೆಯಾಗಿದ್ದು 126 ಮಂದಿ ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 8642 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 249590 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು 126ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 4327 ಕ್ಕೆ ಏರಿಕೆಯಾಗಿದೆ.

- Advertisement -

Leave A Reply

Your email address will not be published.