The news is by your side.

ಖಾನಾಪುರ ಕ್ಷೇತ್ರದ ಅಭಿವೃದ್ಧಿ ನನ್ನ ಗುರಿ : ಅಂಜಲಿ ನಿಂಬಾಳ್ಕರ್

ಬೆಳಗಾವಿ : ಇಲ್ಲಿಯವರೆಗೆ ಹಲವಾರು ಕಾಮಗಾರಿಗಳನ್ನು ಅನುಷ್ಠಾನ ಮಾಡಲಾಗಿದ್ದು ಖಾನಾಪುರ ಕ್ಷೇತ್ರದ ಅಭಿವೃದ್ಧಿ ನನ್ನ ಗುರಿ ಎಂದು ಶಾಸಕಿ ಅಂಜಲಿ ನಿಂಬಾಳ್ಕರ್ ಹೇಳಿದ್ದಾರೆ .

ಇಂದು ತಾಲೂಕಿನ ಸ್ವಗೃಹದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಖಾನಾಪುರ ಕ್ಷೇತ್ರವನ್ನು ಅಭಿವೃದ್ಧಿ ಮಾಡಲು ಸರ್ಕಾರದ ಅನೇಕ ಯೋಜನೆಗಳ ಸದುಪಯೋಗ ಪಡಿಸಿಕೊಂಡಿದ್ದು‌. ತಾಲೂಕಿನ ಅನೇಕ ರಸ್ತೆ ಸುಧಾರಣೆಗೆ ಕರ್ನಾಟಕ ಕೊಳಚೆ ಅಭಿವೃದ್ಧಿ ಯೋಜನೆ ಅನುದಾನ ಬಳಸಿಕೊಳ್ಳಲಾಗಿದೆ‌. ಜೊತೆಗೆ ನಬಾರ್ಡ್ ಯೋಜನೆ ಅಡಿಯಲ್ಲಿ 15 ಕೋಟಿ ಹಣ ಸದುಪಯೋಗ ಮಾಡಿಕೊಂಡು ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.

ಬರುವ ದಿನಗಳಲ್ಲಿ ಮತ್ತಷ್ಟು ಅನುದಾನ ಕ್ಷೇತ್ರಕ್ಕೆ ತಂದು, ಜನಸಾಮಾನ್ಯರ ಸಮಸ್ಯೆಗಳನ್ನು ದೂರ ಮಾಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಅಂಜಲಿ ನಿಂಬಾಳ್ಕರ್ ಅಭಿಪ್ರಾಯಪಟ್ಟರು

- Advertisement -

Leave A Reply

Your email address will not be published.