The news is by your side.

ಅಥಣಿಯಲ್ಲೂ ಕಾಂಗ್ರೆಸ್ ಪ್ರತಿಭಟನೆ

 

ಅಥಣಿ ::ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ಕಾರ್ಮಿಕ ಕಾಯ್ದೆ ತಿದ್ದುಪಡಿ ಕೊರೊನಾ ಭ್ರಷ್ಟಾಚಾರ ನೆರೆ ಪರಿಸ್ಥಿತಿ ಹಾಗೂ ಕಳೆದ ಬಾರಿ ಪರಿಹಾರ ವೈಫಲ್ಯ ಖಂಡಿಸಿ ಸರ್ಕಾರ ವಿರುದ್ಧ ತಾಲೂಕಿನ ಕಾಂಗ್ರೆಸ್ ಘಟಕದ ನಾಯಕರು
ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು.
ಪಟ್ಟನದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಸಾಮಾಜಿಕ ಅಂತರ ಕಾಯ್ದುಕೊಂಡು ಸರ್ಕಾರ ವಿರುದ್ಧ ಘೋಷಣೆ ಕೂಗಿ ಧರಣಿ ನಡೆಸಿದರು. ‌
ಅಥಣಿ ತಹಶೀಲ್ದಾರ್ ಕಚೇರಿ ಎದುರು ಗಿಡ ನೆಡುವ ಮೂಲಕ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಜನ್ಮದಿನಾಚರಣೆ ಆಚರಿಸಿದರು.
ಇದೆ ವೇಳೆ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಮಾತನಾಡಿ ಕೊರೊನಾ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿರುವ ಜೋತೆಗೆ ಹಲವಾರು ಜನವಿರೋಧಿ ಕಾಯ್ದೆ ತಿದ್ದುಪಡಿ ತಂದು ಸ್ವಾರ್ಥ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕೊರೊನಾ ಮಹಾಮಾರಿಗೆ ಜನತೆ ತತ್ತರಿಸಿದೆ . ಬಿಜೆಪಿಯವರು ಇದರಲ್ಲಿ ದುಡ್ಡು ಮಾಡುವ ಹುನ್ನಾರ ನಡೆಸುತ್ತಿದ್ದಾರೆ. ಇದರಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆದಿದೆ. ಭ್ರಷ್ಟಾಚಾರ ಮಾಡಿಲ್ಲ ಎಂದರೆ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿದರು.
ಕಳೆದ ಬಾರಿಯ ಕೃಷ್ಣಾ ನದಿ ಪ್ರವಾಹದ ನೆರೆ ಸಂತ್ರಸ್ತರಿಗೆ ಪರಿಹಾರ ವಿತರಣೆ ಮಾಡಿಲ್ಲ , ಹಲ್ಯಾಳ ಗ್ರಾಮದ ಬಾಲಕ ಪ್ರವಾಹದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ವಿತರಣೆ ಮಾಡಿಲ್ಲ. ಸ್ಥಳಿಯ ಶಾಸಕರು ಜನಪರ ಕಾರ್ಯ ಯಷ್ಟರಮಟ್ಟಿಗೆ ಕಾರ್ಯನಿರ್ವಹಿಸುತ್ತಾರೆ ಎಂಬುದು ತಿಳಿಯುತ್ತದೆ ಎಂದು ಅಥಣಿ ಶಾಸಕ ಹಾಗೂ ಸರ್ಕಾರ ವಿರುದ್ಧ ಹರಿಹಾಯ್ದರು.

Shree Panjurlli Fine Dine ADD

- Advertisement -

Leave A Reply

Your email address will not be published.