ಚಿಕ್ಕೋಡಿ : ಕೊರೊನಾ ಹೆಸರಿನಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ಖಂಡಿಸಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ತಹಶೀಲ್ದಾರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.
ಕೋವಿಡ ವೈರಾಣು ಇಡಿ ವಿಶ್ವವನ್ನೆ ತಲ್ಲಗೊಳಿಸಿದೆ. ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಬಿಜೆಪಿ ಸರಕಾರ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿದೆ. ಕೊರೊನಾ ನಿಂಯಂತ್ರಿಸಲು ವಿವಿಧ ವಸ್ತುಗಳ ಖರೀದಿಯಲ್ಲಿ 2 ಸಾವಿರ ಕೋಟಿ ಭಾರಿ ಪ್ರಮಾಣದ ಅವ್ಯವಹಾರವನ್ನು ರಾಜ್ಯ ಸರಕಾರ ನಡೆಸಿದೆ. ಕರ್ನಾಟಕ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಮಾಡುವ ಮೂಲಕ ಬಂಡವಾಳ ಶಾಹಿಗಳಿಗೆ ಮಣೆ ಹಾಕಿದೆ.
ರೈತರ ಹಿತಕ್ಕಾಗಿ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾಯ್ದೆ 1986 ಸೆಕ್ಷನ 8 ಮತ್ತು 117ಕ್ಕೆ ತಿದ್ದುಪಡಿ ತರುವ ಮೂಲಕ ವ್ಯಾಪಾರಿಗಳು ಕಾರ್ಪೊರೇಟ್ ಸಂಸ್ಥೆಗಳಿಗೆ ನೇರವಾಗಿ ಕೃಷಿ ಉತ್ಪನ್ನಗಳನ್ನು ಖರೀದಿಸಲು ಅನುಮತಿ ನೀಡುವ ಮೂಲಕ ರೈತರನ್ನು ಸುಲಿಗೆ ಮಾಡುವ ಅವಕಾಶ ನೀಡಿದೆ. ಕೈಗಾರಿಕೆ ವಿವಾದಗಳ ಕಾಯ್ದೆ ಕಾರ್ಮಿಕ ವಿರೋಧಿ ಶಾಸನ ಜಾರಿಗೆ ತರುವ ಮೂಲಕ ಕಾರ್ಮಿಕರಿಗೆ ಕೊಡಲಿಯೇಟು ನೀಡಿದೆ. ಅತಿವೃಷ್ಟಿ ನಿರ್ವಹಣೆಯಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸಿಗರು ಆಕ್ರೋಶ ವ್ಯಕ್ತಪಡಿಸಿದರು.
