The news is by your side.

ಕೊರೋನಾ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ : ಕಾಂಗ್ರೆಸ್ ಆರೋಪ

 

ಬೆಳಗಾವಿ: ಕೊರೋನಾ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ , ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಜಾರಿ,
ಸೇರಿದಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಜನವಿರೋದಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ರಾಜ್ಯ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದರು. ಸರ್ಕಾರ ಅಧಿಕಾರ ಬಿಟ್ಟು ಇಳಿಯಬೇಕು ಎಂದು ಆಗ್ರಹಿಸಿ ಘೋಷಣೆ ಕೂಗಿದರು.

Shree Panjurlli Fine Dine ADD

- Advertisement -

Leave A Reply

Your email address will not be published.