The news is by your side.

ಆರೋಗ್ಯ ಸಚಿವ ಶ್ರೀರಾಮುಲುಗೆ ಮಾತೃ ವಿಯೋಗ

 

ಬೆಂಗಳೂರು : ಆರೋಗ್ಯ ಸಚಿವ ಶ್ರೀರಾಮಲು ಅವರ ತಾಯಿ ಹೊನ್ನೂರಮ್ಮ ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ. ಅವರಿಗೆ 95 ವರುಷ ವಯಸಾಗಿತ್ತು.

ಕೊರೋನಾ ಸೋಂಕಿನಿಂದ ಗುಣವಾಗಿ ಗುರುವಾರವಷ್ಟೇ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಹೊನ್ನರಮ್ಮ ತಮ್ಮ ಬಳ್ಳಾರಿಯ ಮನೆಗೆ ತೆರಳಿದ್ದರು.

ಆದರೆ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ತೊಂದರೆಗೊಳಗಾಗಿ ಮತ್ತೆ ಬಳ್ಳಾರಿಯ ಜಿಲ್ಲಾಸ್ಪತ್ರೆಗೆ ಸೇರಿಸಲ್ಪಟ್ಟರು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ 11.50ಕ್ಕೆ ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ 5.30ಕ್ಕೆ ಬಳ್ಳಾರಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ.

ಟ್ವೀಟ್ ಮಾಡುವ ಮೂಲಕ ತಮ್ಮ ತಾಯಿಯ ನಿದಾನವಾರ್ತೆಯನ್ನು ತಿಳಿಸಿರುವ ಶ್ರೀರಾಮುಲು ” ನನ್ನ ತಾಯಿ ಹೊನ್ನೂರಮ್ಮ ವಯೋ ಸಹಜ ಕಾರಣದಿಂದ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇನೆ. ತೊಂಬತ್ತೈದು ವರ್ಷಗಳ ತುಂಬು ಜೀವನ ನಡೆಸಿದ್ದ ಅಮ್ಮ, ಇತ್ತೀಚೆಗಷ್ಟೇ ಕೋವಿಡ್ ಸೋಂಕಿಗೆ ತುತ್ತಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಮುಖರಾಗಿ ಬಳ್ಳಾರಿಯ ಮನೆಗೆ ಹಿಂದಿರುಗಿದ್ದರು”, ಎಂದು ತಿಳಿಸಿದ್ದಾರೆ.

Shree Panjurlli Fine Dine ADD

- Advertisement -

Leave A Reply

Your email address will not be published.