ಬೆಳಗಾವಿ:; ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಗೆ ಕಾರಣವಾದ ಹಿರಿಯ ಅಧಿಕಾರಿಗಳ ಕಿರುಕಳ ವಿರೋಧಿಸಿ ಬೆಳಗಾವಿಯಲ್ಲಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಪದಾಧಿಕಾರಿಗಳು ಈ ಸಂಬಂಧ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಮನವಿ ಸಲ್ಲಿಸಿದರು.
ಸರ್ಕಾರ ಕೊರೊನಾ ವಿರುದ್ಧ ಹೋರಾಟದಲ್ಲಿ ಸರ್ಕಾರಿ ವೈದ್ಯರನ್ನು ಅಮಾನುಷವಾಗಿ ನಡೆಸಿಕೊಳ್ಳುತ್ತಿದೆ.
ಇದರಿಂದ ಬೇಸತ್ತು ನಂಜನಗೂಡಿನ ವೈದ್ಯಾಧಿಕಾರಿ ಡಾ.ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ ಡಾ.ನಾಗೇಂದ್ರ ಅವರ ಆತ್ಮಹತ್ಯೆಗೆ ಕಾರಣವಾಗಿರುವ ಮೇಲಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ವೈದ್ಯರಿಗೆ ಸೂಕ್ತ ಭದ್ರತೆ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಡಾ.ಎಸ್.ಆರ್.ಡುಮ್ಮಗೋಳ, ಕಾರ್ಯದರ್ಶಿ ಡಾ.ವ್ಹಿ.ಎಸ್.ಶಿಂಧೆ, ಖಜಾಂಚಿ ಡಾ.ಎಮ್.ಎಸ್.ಪಲ್ಲೇದ ಸೇರಿದಂತೆ ಇನ್ನಿತರ ಸರ್ಕಾರಿ ವೈದ್ಯರು ಉಪಸ್ಥಿತರಿದ್ದರು
