ಬೆಳಗಾವಿ: ಜಿಲ್ಲೆಯ ರಾಜಕಾರಣ ದ ಜತೆಗೆ ರಾಜ್ಯದ ರಾಜಕಾರಣದಲ್ಲಿಯೂ ಅಚ್ಚರಿ ಹಾಗೂ ಶಾಕ್ ವೇವ್ ಸೃಷ್ಟಿಸಿ ಲಕ್ಷ್ಮಣ ಸವದಿ ಅವರು ಉಪ ಮುಖ್ಯಮಂತ್ರಿ ಯಾಗಿ ಒಂದು ವರ್ಷ ಪೂರೈಸಿದರು.
ಈ ಹಿನ್ನೆಲೆಯಲ್ಲಿ ಲಕ್ಷ್ಮಣ ಸವದಿ ಅವರು ಬಿಜೆಪಿ ಪಕ್ಷದ ರಾಷ್ಟ್ರ ಮತ್ತು ರಾಜ್ಯದ ನಾಯಕರಿಗೆ ಅಭಿನಂದನೆ ಸಲ್ಲಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.
ಲಕ್ಷ್ಮಣ ಸವದಿ ಅವರು ರಾಜ್ಯದ ಉಪಮುಖ್ಯಮಂತ್ರಿ ಆಗುತ್ತಾರೆ ಎಂದು ಯಾರೂ ಊಹೆ ಕೂಡ ಮಾಡಿರಲಿಲ್ಲ. ಆದ್ರೆ ಅಚ್ಚರಿಯ ಬೆಳವಣಿಗೆ ಎಂಬಂತೆ ಬಿಜೆಪಿ ಹೈಕಮಾಂಡ್ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಲಕ್ಷ್ಮಣ ಸವದಿ ಅವರನ್ನು ಡಿಸಿಎಂ ಮಾಡಿದ್ದರು.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ, ಜೆ.ಪಿ.ನಡ್ಡಾ, ಬಿ.ಎಲ್.ಸಂತೋಷ, ಸಿಎಂ ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಮತ್ತು ಅಧಿಕಾರಿಗಳನ್ನು ಸ್ಮರಿಸಿಕೊಂಡಿದ್ದಾರೆ.
