The news is by your side.

ತಕ್ಷಣವೇ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಲು ಆಗ್ರಹ

ಬೆಂಗಳೂರು: ಶೀಘ್ರದಲ್ಲೇ ಶಿಕ್ಷಕರ ವರ್ಗಾವಣೆ  ವೇಳಾಪಟ್ಟಿ ಪ್ರಕಟಿಸುವಂತೆ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್‌. ಷಡಕ್ಷರಿ ಅವರು ಆಗ್ರಹಿಸಿದ್ದಾರೆ.

ಸರಕಾರ ಹೊಸದಾಗಿ ಜಾರಿಗೆ ತಂದಿರುವ ಶಿಕ್ಷಕರ ವರ್ಗಾವಣೆ ಕಾಯ್ದೆ ಅನ್ವಯ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆಯನ್ನು ಪೂರ್ಣಗೊಳಿಸಲು ವೇಳಾಪಟ್ಟಿ ಪ್ರಕಟಿಸಬೇಕು.

ಕಳೆದ ಸಾಲಿನಲ್ಲಿ ಕೆಲವು ಶಿಕ್ಷಕರು ಕಡ್ಡಾಯ ಅಥವಾ ಹೆಚ್ಚುವರಿ ವರ್ಗಾವಣೆಗೆ ಒಳಗಾಗಿದ್ದು, ಅಂತಹ ಶಿಕ್ಷಕರಿಗೆ ನೆರವಾಗುವ ಉದ್ದೇಶದಿಂದ ನೂತನ ವರ್ಗಾವಣೆ ಕಾಯ್ದೆಯಲ್ಲಿ ವರ್ಗಾವಣೆಗೆ ಅವಕಾಶ ಕಲ್ಪಿಸಬೇಕು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರನ್ನು ಭೇಟಿ ಮಾಡಿದ ಸಂಘದ ಪದಾಧಿಕಾರಿಗಳ ನಿಯೋಗವು, ಶಿಕ್ಷಕರ ಸಮಸ್ಯೆಗೆ ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದೆ.

Shree Panjurlli Fine Dine ADD

- Advertisement -

Leave A Reply

Your email address will not be published.