The news is by your side.

ಬೆಳಗಾವಿ ಗ್ರಾಮೀಣ ಕ್ಷೇತ್ರ ಕ್ಕೆ ವಿಶೇಷ ಅನುದಾನ ನೀಡುವಂತೆ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹ

ಬೆಳಗಾವಿ: ನೆರೆ ಪರಿಸ್ಥಿತಿ ಕುರಿತು ವೈಮಾನಿಕ ಸಮೀಕ್ಷೆಗೆ ಆಗಮಿಸಿದ್ದ ಯಡಿಯೂರಪ್ಪ ಅವರಿಗೆ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅತಿವೃಷ್ಟಿ ಸಂಬಂಧ ವಿಶೇಷ ಅನುದಾನ ನೀಡುವಂತೆ ಕೇಳಿಕೊಂಡರು. ಅಗಸ್ಟ್ ತಿಂಗಳಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿಯುತ್ತಿದ್ದು, ಇದಕ್ಕೆ ಬೆಳಗಾವಿ ಗ್ರಾಮೀಣ ಕ್ಷೇತ್ರವೂ ಹೊರತಾಗಿಲ್ಲ. ಹಿಂದಿನ ವರ್ಷದ ಅತೀವೃಷ್ಠಿಯಿಂದ ಸರಿಯಾದ ರೀತಿಯಲ್ಲಿ ಪರಿಹಾರ ಸಿಗದೇ ಕಂಗಾಲಾದ ಗ್ರಾಮಸ್ಥರು ಇನ್ನೂ ಸುಧಾರಿಸುತ್ತಿರುವಾಗಲೇ ಈ ವರ್ಷವೂ ಅತೀ ಮಳೆ ಸುರಿಯುತ್ತಿದೆ.

ಗ್ರಾಮೀಣ ಕ್ಷೇತ್ರವು ಹೆಚ್ಚಾಗಿ ಕೃಷಿ ಆಧಾರಿತವಾಗಿದ್ದು, ರೈತರು ಬೆಳೆದ ಬೆಳೆಯು ಸಂಪೂರ್ಣವಾಗಿ ಹಾಳಾಗಿದೆ. ಮಳೆನೀರಿನಿಂದ ಸಂಪೂರ್ಣ ಆವೃತವಾಗಿ ಯಾವುದೇ ಬೆಳೆಯನ್ನು ಬೆಳೆಯಲಾರದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಟೀ ಅಲ್ಲದೇ ಗ್ರಾಮದಲ್ಲಿರುವ ಸಣ್ಣ ಕೆರೆ, ಅಣೆಕಟ್ಟು, ರಸ್ತೆಗಳು ಸಹ ಹಾಳಾಗಿವೆ. ರಸ್ತೆಗಳು ಮಳೆಯಿಂದ ಹಾಳಾಗಿದ್ದು, ಸಂಚಾರ ವ್ಯವಸ್ಥೆಗೆ ಅಡೆತಡೆಯಾಗಿದೆ. ಹಾಗಾಗಿ ಕ್ಷೇತ್ರದಲ್ಲಿ ಉಂಟಾಗಿರುವ ಹಾನಿಗೆ ಹೆಚ್ಚಿನ ಪರಿಹಾರ ಬಿಡುಗಡೆ ಮಾಡಬೇಕು ಎಂದು ಹೆಬ್ಬಾಳಕರ್ ಕೋರಿದ್ದಾರೆ.2019/20ನೇ ಸಾಲಿನಲ್ಲಿ ಸುರಿದ ಅತೀವ ಮಳೆಗೆ ಗ್ರಾಮೀಣ ಕ್ಷೇತ್ರದ ಸುಮಾರು 5 ಸಾವಿರಕ್ಕಿಂತಲೂ ಹೆಚ್ಚಿನ ಮನೆಗಳು ಕುಸಿದಿದ್ದು, ಅದರಲ್ಲಿ ಸುಮಾರು 1000 ಸಂತ್ರಸ್ಥರಿಗೆ ಪರಿಹಾರ ನೀಡಲಾಗಿದೆ.

ಹೆಚ್ಚುವರಿ 1 ಸಾವಿರಕ್ಕಿಂತಲೂ ಹೆಚ್ಚಿನ ಸಂತ್ರಸ್ಥರಿಗೆ ಪರಿಹಾರ ಒದಗಿಸುವಂತೆ ಸಲ್ಲಿಸಿದ ಮನವಿಗೆ ಈವರೆಗೂ ಸ್ಪಂದನೆ ಸಿಕ್ಕಿಲ್ಲ. ಗ್ರಾಮೀಣ ಕ್ಷೇತ್ರದ ಒಟ್ಟಾರೆ 6 ಸಾವಿರಕ್ಕಿಂತಲೂ ಹೆಚ್ಚಿನ ಸಂತ್ರಸ್ಥರಿಗೆ ಪರಿಹಾರ ದೊರಕಬೇಕಿದೆ. ಬಾಕಿ ಇರುವ ಸಂತ್ರಸ್ಥರಿಗೆ ಶೀಘ್ರ ಪರಿಹಾರವನ್ನು ಒದಗಿಸಬೇಕು ಎಂದು ಅವರು ಮನವಿ ಮಾಡಿದರು.

- Advertisement -

Leave A Reply

Your email address will not be published.