The news is by your side.

ಅಥಣಿಯಲ್ಲಿ ಬೀದಿಬದಿ ವ್ಯಾಪಾರಸ್ಥರಿಂದ ಪ್ರತಿಭಟನೆ

 

ಅಥಣಿ: ಸರ್ಕಾರ ವ್ಯಾಪಾರಸ್ಥರ ನೆರವಿಗೆ ನಿಲ್ಲಬೇಕೆಂದು ಒತ್ತಾಯಿಸಿ ಅಥಣಿ ತಹಶೀಲ್ದಾರ್ ಕಚೇರಿ ಮುಂದೆ ಬೀದಿಬದಿ ವ್ಯಾಪಾರಸ್ಥರು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು.
ಅಥಣಿ ಪಟ್ಟಣದಲ್ಲಿ ಪುರಸಭೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ತೊಂದರೆ ನೀಡುತ್ತಿದ್ದಾರೆ. ಇದರಿಂದ ವ್ಯಾಪಾರಕ್ಕೆ ಸಮಸ್ಯೆಯಾಗುತ್ತಿದೆ ಎಂದು ಆರೋಪಿಸಿ, ಅವರು ಜೀವನೋಪಾಯಕ್ಕಾಗಿ ಈ ಮೊದಲಿನ ಸ್ಥಳದಲ್ಲಿಯೇ ವ್ಯಾಪಾರ ವಹಿವಾಟು ನಡೆಸಲು ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಆರ್ಥಿಕ ಸಂಕಷ್ಟದಲ್ಲಿ ಇರುವ ಬೀದಿ ವ್ಯಾಪಾರಸ್ಥರ ಕುಟುಂಬಗಳ ನೆರವಿಗೆ ಸರ್ಕಾರ ನಿಲ್ಲಬೇಕು ಎಂದು ಆಗ್ರಹಿಸಿದರು.
ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದೆ ವೇಳೆ ರಫೀಕ್ ಸಾಬ್ ಮಾತನಾಡಿ, ಕೋವಿಡ್ ದಿಂದ ಲಾಕ್ ಡೌನ್ ಘೋಷಣೆಯಿಂದ ಬೀದಿ ವ್ಯಾಪಾರಸ್ಥರು ತೊಂದರೆ ಅನುಭವಿಸುವಂತಾಗಿದೆ. ಇದರಿಂದ ನಮ್ಮ ಕುಟುಂಬಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದೆ. ಆದ ಕಾರಣ ಸರ್ಕಾರ ಬೀದಿ ವ್ಯಾಪಾರಸ್ಥರಿಗೆ ಪರಿಹಾರ ಘೋಷಿಸಬೇಕು ಎಂದು ವಿನಂತಿಸಿಕೊಂಡರು.

ಈಗಾಗಲೇ ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿಕೊಂಡಿದ್ದೆವೆ. ಆದರೆ ಯಾವುದೇ ರೀತಿ ಸ್ಪಂಧನೆ ದೊರೆತಿಲ್ಲ ಎಂದು ಕಿಡಿಕಾರಿದರು.

- Advertisement -

Leave A Reply

Your email address will not be published.