The news is by your side.

ಕೆಎಚ್‍ಬಿ ಕಾಲೋನಿಯಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ

 

ಬೆಳಗಾವಿ:: 3 ಕೋಟಿ ವೆಚ್ಛದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಣಬರಗಿ ಕೆಎಚ್‍ಬಿ ಕಾಲೋನಿಯಲ್ಲಿ
ಶಾಸಕ ಅನಿಲ್ ಬೆನಕೆ ಚಾಲನೆ ನೀಡಿದರು.
ಕಳೆದ ಹಲವಾರು ವರ್ಷಗಳಿಂದ ಕಣಬರಗಿ ಕೆಎಚ್‍ಬಿ ಕಾಲೋನಿಯು ಅಭಿವೃದ್ಧಿಯಿಂದ ವಂಚಿತವಾಗಿತ್ತು. ಹೀಗಾಗಿ ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರಿಸಿ ಅಭಿವೃದ್ಧಿ ಕೈಗೊಳ್ಳುವಂತೆ ಇಲ್ಲಿನ ನಿವಾಸಿಗಳು ಸಾಕಷ್ಟು ಹೋರಾಟ ಮತ್ತು ಮನವಿ ಮಾಡಿಕೊಂಡಿದ್ದರು. ಬಳಿಕ ಶಾಸಕ ಅನಿಲ್ ಬೆನಕೆ ಅವರು ಕಣಬರಗಿ ಕೆಎಸ್‍ಬಿ ಕಾಲೋನಿಯನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದರು.
ಹೀಗಾಗಿ ಬುಧವಾರ ಈ ಪ್ರದೇಶದಲ್ಲಿ ರಸ್ತೆ, ಚರಂಡಿ ಸೇರಿದಂತೆ ಮೂಲ ಸೌಲಭ್ಯಗಳ ಅಭಿವೃದ್ಧಿಗೋಸ್ಕರ 3 ಕೋಟಿ ಅನುದಾನದ ವಿವಿಧ ಕಾಮಗಾರಿಗಳಿಗೆ ಶಾಸಕ ಅನಿಲ್ ಬೆನಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಮೂಲಸೌಲಭ್ಯಗಳಿಂದ ಈ ಹೌಸಿಂಗ್ ಕಾಲೋನಿ ನರಳುವಂತಾಗಿತ್ತು. ಹೀಗಾಗಿ ಇಲ್ಲಿನ ಜನರಿಗೆ ಯಾವುದೇ ರೀತಿ ತೊಂದರೆ ಆಗಬಾರದು ಎಂಬ ಉದ್ದೇಶದಿಂದ 3 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.

- Advertisement -

Leave A Reply

Your email address will not be published.