The news is by your side.

ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ಆಗ್ರಹಿಸಿ ಪ್ರತಿಭಟನೆ : ಮನವಿ ಅರ್ಪಣೆ

 

ಬೆಳಗಾವಿ:: ಪಿರನವಾಡಿಯಲ್ಲಿ ಪ್ರತಿಮೆ ತೆರವುಗೊಳಿಸಿದ ಸ್ಥಳದಲ್ಲೇ ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪಿಸಬೇಕು ಎಂದು ಆಗ್ರಹಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ, ವಿಶ್ವ ನವನಿರ್ಮಾಣ ಸೇನೆ ಮತ್ತು ವಿವಿಧ ಸಂಘಟನೆಗಳಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘಟನೆಯ ಮುಖಂಡ ರಾಜಶೇಖರ ದೊಡ್ಡಣ್ಣ ಮೌರ್ಯ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ಪಿರನವಾಡಿಯಿಂದ ತೆರವುಗೊಳಿಸಿದ್ದು ಸರಿಯಲ್ಲ. ಅದೇ ಸ್ಥಳದಲ್ಲಿ ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘಟನೆಯ ಮೋಹನ್ ಮೌರ್ಯ, ರಾಜ್ಯ ಸಂಚಾಲಕಿ ಮಂಜುಳಾ, ಬೆಳಗಾವಿ ಜಿಲ್ಲಾ ಅಧ್ಯಕ್ಷ ಮಂಜುನಾಥ ಬೆನಕಡ್ಡಿ ಮತ್ತಿತರರು ಇದ್ದರು.

Shree Panjurlli Fine Dine ADD

- Advertisement -

Leave A Reply

Your email address will not be published.