The news is by your side.

ಶ್ರೀನಗರ ವೈಷ್ಣವಿ ಮಹಿಳಾ ಮಂಡಳದಿಂದ ಆಸ್ಪತ್ರೆಗಳ ಅವ್ಯವಸ್ಥೆ ವಿರುದ್ಧ ಹೋರಾಟ

ಬೆಳಗಾವಿ: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ. ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯದಿಂದ ಸಾವಿನ ಪ್ರಮಾಣ ಹೆಚ್ಚುತ್ತಲೇ ಇದೆ. ಆದರೆ ಜಿಲ್ಲಾಡಳಿತ ಇದೆಲ್ಲವನ್ನೂ ಮುಚ್ಚಿಡುತ್ತಿದೆ. ಮೇಲಾಗಿ ಕೊರೋನಾ ಇದ್ದರೂ ಪೋಸ್ಟ್ ಮಾರ್ಟಮ್ ಮಾಡಿ ಶವವನ್ನು ಹಸ್ತಾಂತರಿಸಲಾಗುತ್ತಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ. ಜನಸಾಮಾನ್ಯರು, ಸಾಮಾನ್ಯ ರೋಗಿಗಳನ್ನು ನಿರ್ಲಕ್ಷಿಸಲಾಗುತ್ತಿದೆ. ಇನ್ನು ಖಾಸಗಿ ಆಸ್ಪತ್ರೆಗಳಲ್ಲಿ ಜನಸಾಮಾನ್ಯರಿಗೆ ಚಿಕಿತ್ಸೆಯೇ ಸಿಗುತ್ತಿಲ್ಲ.ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೆಳಗಾವಿ ಶ್ರೀನಗರ ವೈಷ್ಣವಿ ಮಹಿಳಾ ಮಂಡಳದ ಸದಸ್ಯೆಯರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ, ಸರಿಯಾದ ಸೌಲಭ್ಯಗಳಿಲ್ಲ. ಕೋವಿಡ್ ಹೊರತುಪಡಿಸಿ ಉಳಿದ ರೋಗಿಗಳ ಕಡೆಗೆ ಕಣ್ಣೆತ್ತಿಯೂ ನೋಡುತ್ತಿಲ್ಲ. ಇಂತಹ ಅವ್ಯವಸ್ಥೆಯನ್ನು ಹೋಗಲಾಡಿಸಬೇಕು, ಖಾಸಗಿ ಆಸ್ಪತ್ರೆಗಳಲ್ಲೂ ಜನಸಾಮಾನ್ಯರಿಗೆ ಸಮರ್ಪಕ ಚಿಕಿತ್ಸೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೆಳಗಾವಿ ಶ್ರೀನಗರ ವೈಷ್ಣವಿ ಮಹಿಳಾ ಮಂಡಳದ ಸದಸ್ಯೆಯರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

- Advertisement -

Leave A Reply

Your email address will not be published.