The news is by your side.

ನೀಟ್ ಜೆಇಇ ಪರೀಕ್ಷೆ ಮುಂದೂಡಲು ಆಗ್ರಹಿಸಿ ವಿದ್ಯಾರ್ಥಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು, ಆ. ೨೮- ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡುವಂತೆ ನಗರದಲ್ಲಿಂದು ವಿದ್ಯಾರ್ಥಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.

ರಾಜ್ಯದ್ ಎಸ್‌ಯುಐ ಅಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿ ಕಾಂಗ್ರೆಸ್‌ನ ಕಾರ್ಯಕರ್ತರು ನಗರದ ಕಾಂಗ್ರೆಸ್ ಭವನದ ಬಳಿ ನೀಟ್ ಪರೀಕ್ಷೆಗಳ್ನು ಮುಂದೂಡುವಂತೆ ಆಗ್ರಹಿಸಿ ಪ್ರತಿಭಟನಾ ಧರಣಿ ನಡೆಸಿದರು.

ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡುವಂತೆ ಕಾಂಗ್ರೆಸ್ ಇಂದು ದೇಶದ ಎಲ್ಲೆಡೆ ಪ್ರತಿಭಟನೆ ನಡೆಸಿದ್ದು, ಅದರಂತೆ ನಗರದಲ್ಲೂ ವಿದ್ಯಾರ್ಥಿ ಕಾಂಗ್ರೆಸ್ ಈ ಪ್ರತಿಭಟನೆ ನಡೆಸಿ ಕೊರೊನಾ ನಡುವೆ ಪರೀಕ್ಷೆ ನಡೆಸುವುದು ಸರಿಯಲ್ಲ. ಪ್ರತಿಭಟನೆ ಮುಂದೂಡುವಂತೆ ಒತ್ತಾಯಿಸಿತು.

ಪ್ರತಿಭಟನಾಕಾರರನ್ನುದ್ದೇಶಿಸಿ ರಾಜ್ಯ ವಿದ್ಯಾರ್ಥಿ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಕೊರೊನಾ ಸಂಕಷ್ಟದಲ್ಲಿ
ಪರೀಕ್ಷೆ ನಡೆಸುವುದರಿಂದ ಬೇರೆ ರಾಜ್ಯದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರಲು ತೊಂದರೆಯಾಗುತ್ತದೆ .

ಹಾಗೆಯೇ ಬಡ ಮಕ್ಕಳಿಗೂ ಉಳಿದುಕೊಳ್ಳಲು ಸಮಸ್ಯೆಯಾಗುತ್ತದೆ. ಜತೆಗೆ ವಿದ್ಯಾರ್ಥಿಗಳು ಸೋಂಕಿಗೆ ಒಳಗಾಗುವ ಭೀತಿಯು ಇದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಒತ್ತಾಯಿಸಿದ್ದರು. ರಾಜ್ಯದಲ್ಲಿ ಕೋವಿಡ್ ದಿನೇ ದಿನೇ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಪರೀಕ್ಷೆ ಬರೆಯುವುದು ವಿದ್ಯಾರ್ಥಿಗಳಿಗೆ ಕಷ್ಟ. ಈಗ ಪರೀಕ್ಷೆ ಬೇಡ ಸರ್ಕಾರ ಪರೀಕ್ಷೆ ಮುಂದೂಡಬೇಕು. ಇಲ್ಲದಿದ್ದರೆ ಹೋರಾಟ ವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಅವರು ಹೇಳಿದರು.

Shree Panjurlli Fine Dine ADD

- Advertisement -

Leave A Reply

Your email address will not be published.