The news is by your side.

ಪಿರನವಾಡಿಯಲ್ಲಿ ಸಧ್ಯ ಪರಿಸ್ಥಿತಿ ಹತೋಟಿಯಲ್ಲಿದೆ ಎಂದ ಸಚಿವ ಜಾರಕಿಹೊಳಿ

ಬೆಳಗಾವಿಯ ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆ ಸ್ಥಾಪನೆ ವಿವಾದ ವಿಚಾರವಾಗಿ ಮಾತನಾಡಿದ ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಪೀರನವಾಡಿಯಲ್ಲಿ ಗಲಾಟೆಯಾಗಿಲ್ಲ, ಸಣ್ಣ ಪುಟ್ಟ ಘಟನೆ ನಡೆದಿದೆ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡಿಗರಿಗೆ ಹಲ್ಲೆಯಾದ ಬಗ್ಗೆ ಗೊತ್ತಿಲ್ಲ. ಸಂಪುರ್ಣ ಮಾಹಿತಿ ಪಡೆದು ಕಾನೂನು ರೀತಿ ಕ್ರಮಕೈಗೊಳ್ಳಲು ಸೂಚಿಸುತ್ತೇನೆ. ಸಧ್ಯ ಪೀರನವಾಡಿಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದರು.

ಇನ್ನು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಮುಂದಿನ ಮೂರು ವರ್ಷಗಳ ಕಾಲ ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯನ್ನೂ ಯಡಿಯೂರಪ್ಪ ನೇತೃತ್ವದಲ್ಲೇ ಎದುರಿಸುತ್ತೇವೆ ಎಂದು ಹೇಳಿದರು.

Shree Panjurlli Fine Dine ADD

- Advertisement -

Leave A Reply

Your email address will not be published.