ತಂದೆಯೋರ್ವ ತನ್ನ ಮೂವರು ಮಕ್ಕಳಿಗೆ ವಿಷವುಣಿಸಿ, ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಗೋಕಾಕ್ ತಾಲೂಕಿನ ಕಡಬಗಟ್ಟಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಹುಕ್ಕೇರಿ ತಾಲ್ಲೂಕಿನ ರಾಜಕಟ್ಟಿ ಗ್ರಾಮದ ಮಾರುತಿ ಯಲ್ಲಪ್ಪ ಪೂಜಾರಿ (37), ಮಕ್ಕಳಾದ ಸಮರ್ಥ (8), ಯಲ್ಲಪ್ಪ (6), ಪೂಜಾ (4) ಎಂದು ಗುರುತಿಸಲಾಗಿದೆ.
ಅಂಕಲಗಿ ಪ್ರಾಥಮಿಕ ಕೇಂದ್ರಕ್ಕೆ ಹೋಗಿ ಬರುವುದಾಗಿ ಹೇಳಿ ಮಕ್ಕಳ ಸಮೇತ ಹೊರ ಬಂದಿದ್ದ ಮಾರುತಿ, ಬಳಿಕ ಕಡಬಗಟ್ಟಿ ಬೆಟ್ಟದ ಪ್ರದೇಶದಲ್ಲಿ ಮಕ್ಕಳಿಗೆ ವಿಷ ಉಣಿಸಿ, ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
