The news is by your side.

276 ಕೊರೊನಾ ಪಾಸಿಟಿವ್ ಸರ್ಕಾರದ ಲೆಕ್ಕದಲ್ಲಿ 3 ಸಾವು

ಬೆಳಗಾವಿ: ಜಿಲ್ಲೆಯಲ್ಲಿ ಇಂದು ಹೊಸದಾಗಿ ಬರೊಬ್ಬರಿ 276 ಜನರಿಗೆ ಕೊರೊನಾ ಸೋಂಕು ಹರಡಿದೆ. ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು 3 ಮಂದಿ ಮೃತಪಟ್ಟಿದ್ದಾರೆ. ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಜಿಲ್ಲಾ ಆರೋಗ್ಯ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ 276 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 11719 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ 8324 ಪ್ರಕರಣ

ಕರ್ನಾಟಕದಲ್ಲಿ ಇಂದು ಕೊರೋನಾ ರೌದ್ರಾವತಾರ ಮುಂದುವರೆಸಿದ್ದ ಇಂದು ರಾಜ್ಯದಲ್ಲಿ 8324 ಪ್ರಕರಣ ಪತ್ತೆಯಾಗಿದ್ದು 115 ಮಂದಿ ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 8324 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 23 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು 115 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 5483 ಕ್ಕೆ ಏರಿಕೆಯಾಗಿದೆ.

Shree Panjurlli Fine Dine ADD

- Advertisement -

Leave A Reply

Your email address will not be published.