The news is by your side.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೊರೊನಾ ಪಾಸಿಟಿವ್

ಬೆಳಗಾವಿ: ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಈ ಬಗ್ಗೆ ಅವರು ನೀಡಿದ ಹೇಳಿಕೆಯನ್ನು ಇಲ್ಲಿ ಯಥಾವತ್ತಾಗಿ ನೀಡಲಾಗಿದೆ.

“ನನಗೆ ಕೊವಿಡ್ ಪಾಸಿಟಿವ್ ಧೃಡಪಟ್ಟಿದ್ದು , ವೈದ್ಯರ ಸಲಹೆಯ ಮೇರೆಗೆ 14 ದಿನಗಳ ಕಾಲ ಮನೆಯಲ್ಲಿಯೇ ಕ್ವಾರೆಂಟೇನ್ ಆಗಲಿದ್ದೇನೆ. ನನ್ನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರು, ಕೊವಿಡ್ ಪರೀಕ್ಷೆ ಮಾಡಿಸಿಕೊಂಡು ಕ್ವಾರೆಂಟೇನ್ ಆಗಬೇಕಾಗಿ ವಿನಂತಿ!

ಸದ್ಯಕ್ಕೆ ನನ್ನ ಆರೋಗ್ಯ ಪರಿಸ್ಥಿತಿ ಸಾಮಾನ್ಯವಾಗಿದ್ದು, ನಿಮ್ಮೆಲ್ಲರ ಪ್ರೀತಿ, ಹಾರೈಕೆಗಳೊಂದಿಗೆ ಮತ್ತೆ ಜನಸೇವೆಗೆ ಮರಳುತ್ತೇನೆ.”

Shree Panjurlli Fine Dine ADD

- Advertisement -

Leave A Reply

Your email address will not be published.