The news is by your side.

ರಾಜ್ಯದಲ್ಲಿ ಸೋಮವಾರ ಸೋಂಕಿಗೆ 113 ಬಲಿ

ಬೆಂಗಳೂರು : ರಾಜ್ಯದಲ್ಲಿ ಸೋಮವಾರ 6495 ಜನರಲ್ಲಿ ಕೊರೊನಾ ಸೋಂಕು ಕಂಡುಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,42,423ಕ್ಕೆ ಏರಿಕೆಯಾಗಿದೆ, ಅಲ್ಲದೆ ಸೋಂಕಿನಿಂದ ಬಳಲುತ್ತಿದ್ದ 113 ಮಂದಿ ಸೋಂಕಿಗೆ ಬಲಿಯಾಗಿದ್ದು ಈವರೆಗೆ 5702 ಮಂದಿ ಮೃತಪಟ್ಟಿದ್ದಾರೆ.

ಸೋಂಕಿನಿಂದ ಬಳಲುತ್ತಿದ್ದ 7238 ಜನ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಈವರೆಗೆ 2,49,467 ಮಂದಿ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಇನ್ನೂ 87235 ಸಕ್ರಿಯ ಪ್ರಕರಣಗಳಿವೆ. 747 ಜನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒಟ್ಟು 43,132 ಮಂದಿಗೆ ಕೋವಿಡ್ ಸೋಂಕು ಪರೀಕ್ಷೆ ನಡೆಸಲಾಗಿದೆ.

ಬೆಂಗಳೂರಿನಲ್ಲಿ ಇಂದು 1862 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದ್ದು, 27 ಮಂದಿ ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆ 1,27,336 ಕ್ಕೆ ಏರಿಕೆಯಾಗಿದ್ದು, 37116 ಸಕ್ರಿಯ ಪ್ರಕರಣಗಳಿವೆ.

- Advertisement -

Leave A Reply

Your email address will not be published.