The news is by your side.

ಉತ್ತರಪ್ರದೇಶದ ವೈದ್ಯ ಡಾ.ಕಫೀಲ್ ಖಾನ್ ಬಿಡುಗಡೆ

ಮಥುರಾ:  ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ಉತ್ತರಪ್ರದೇಶದ ವೈದ್ಯ ಡಾ.ಕಫೀಲ್ ಖಾನ್ ಅವರನ್ನು ಬುಧವಾರ ಮಧ್ಯರಾತ್ರಿ ಮಥುರಾ ಜೈಲಿನಿಂದ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಮಂಗಳವಾರ ಆದೇಶ ನೀಡಿದ್ದ ಅಲಹಾಬಾದ್ ಹೈಕೋರ್ಟ್, ಕಫೀಲ್ ಖಾನ್ ಬಂಧನ ಅಕ್ರಮ ಎಂದು ಹೇಳಿತ್ತು. ಅಲ್ಲದೆ, ಕಫೀಲ್ ಅವರನ್ನೂ ಕೂಡಲೇ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ತಾಕೀತು ಮಾಡಿತ್ತು.

ಕಫೀಲ್ ಭಾಷಣದಲ್ಲಿ ದ್ವೇಷ ಅಥವಾ ಹಿಂಸೆಯನ್ನು ಪ್ರಚೋದಿಸುವ ಯಾವುದೇ ಅಂಶ ಕಂಡು ಬಂದಿಲ್ಲ ಎಂದು ಸ್ಪಷ್ಟಪಡಿಸಿತ್ತು.

- Advertisement -

Leave A Reply

Your email address will not be published.