The news is by your side.

ದೇಶಾದ್ಯಂತ 10,12,367 ಕೊರೊನಾ ಪರೀಕ್ಷೆ

 

 

ಹೊಸ ದಿಲ್ಲಿ:: ದೇಶದ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 10,12,367 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಹೇಳಿದೆ.

ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 10,12,367 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಸೆ.1 ರವರೆಗೂ 4,43,37,201 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ನಡುವೆ ಒಂದೇ ದಿನ ದೇಶದಾದ್ಯಂತ 78,357 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 37,69,524ಕ್ಕೆ ತಲುಪಿದೆ. ಇನ್ನು ನಿನ್ನೆ ದಾಖಲೆಯ 1045 ಮಂದಿ ಮಹಾಮಾರಿ ವೈರಸ್ನಿಂದ ಸಾವನ್ನಪ್ಪಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 66,333ಕ್ಕೆ ಏರಿಕೆಯಾಗಿದೆ.

37,69,524 ಮಂದಿ ಸೋಂಕಿತರ ಪೈಕಿ 29,019,09 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿನ್ನೂ 8,01,282 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

- Advertisement -

Leave A Reply

Your email address will not be published.