The news is by your side.

9860 ಮಂದಿಗೆ ಕೊರೊನಾ ಪಾಸಿಟಿವ್:113 ಮಂದಿ ಸಾವು

 

ಬೆಂಗಳೂರು: ಬುಧವಾರ ರಾಜ್ಯದಲ್ಲಿ 9860 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,61341ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 113 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5950ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 32 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 113 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3420 ಹೊಸ ಪ್ರಕರಣಗಳು ವರದಿಯಾಗಿದೆ.

- Advertisement -

Leave A Reply

Your email address will not be published.