The news is by your side.

ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೆ ಜ್ವರ : ರಾಜಾಜಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲು

 

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೆ ಜ್ವರ ಬಂದಿದ್ದು ರಾಜಾಜಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದೆಹಲಿ ಪ್ರವಾಸ ಮುಗಿಸಿ ಮರಳಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವೈದ್ಯರ ಸಲಹೆ ಮೇರೆಗೆ ಆಗಸ್ಟ್ 31ರವರೆಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದಿದ್ದರು.
ಒಂದು ವಾರ ಚಿಕಿತ್ಸೆ ಮುಂದುವರಿಸುವಂತೆ ವೈದ್ಯರು ಸಲಹೆ ನೀಡಿದ್ದರೂ, ಡಿ.ಕೆ.ಶಿವಕುಮಾರ್ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು.
ಮನೆಗೆ ತೆರಳಿದ ಮೇಲೆ ಮತ್ತೆ ತೀವ್ರ ಜ್ವರ ಕಾಣಿಸಿದೆ. ಇದರಿಂದ ರಾರಾಜೀ ನಗರ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಶಿವಕುಮಾರ್ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿವೆ.

- Advertisement -

Leave A Reply

Your email address will not be published.