The news is by your side.

ರಾಗಿಣಿ ಅಪಾರ್ಟ್ ಮೆಂಟ್ ನಲ್ಲಿ ಶೋಧ : ನಟಿ ಸಿ ಸಿ ಬಿ ವಶಕ್ಕೆ

ಬೆಂಗಳೂರು: ನಟಿ ರಾಗಿಣಿ ದ್ವಿವೇದಿ ಅವರನ್ನು
ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟಿಗೆ ಸಂಬಂಧಿಸಿದಂತೆ ಸಿಸಿಬಿ ವಶಕ್ಕೆ ಪಡೆದಿದೆ ಎಂದು ವರದಿಯಾಗಿದೆ.

ಇಂದು ಬೆಳ್ಳಂಬೆಳಗ್ಗೆ 6.35ಕ್ಕೆ ಸಿಸಿಬಿ ಇನ್ಸ್ ಪೆಕ್ಟರ್ ಅಂಜುಮಾಲಾ ಅವರ ನೇತೃತ್ವದಲ್ಲಿ ರಾಗಿಣಿ ಅವರ ಯಲಹಂಕದ
ಜ್ಯುಡಿಷಿನಲ್ ಲೇಔಟ್ ನಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.

ಸತತ 3 ಗಂಟೆ ಶೋಧ ಕಾರ್ಯ ಬಳಿಕ ಮನೆ ಕೀ, ಕಾರು ಕೀ, ಮೊಬೈಲ್ ಅನ್ನು ವಶಕ್ಕೆ ಪಡೆದು ರಾಗಿಣಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಮಾದಕ ವಸ್ತು ಮಾರಾಟ ದಂಧೆ ಪ್ರಕರಣದಲ್ಲಿ ರಾಗಿಣಿ ಆಪ್ತ ರವಿ ಶಂಕರ್ ನನ್ನು ಸಿಸಿಬಿ ಪೊಲೀಸರು ನಿನ್ನೆಯಷ್ಟೇ ಬಂಧಿಸಿದ್ದರು.

Shree Panjurlli Fine Dine ADD

- Advertisement -

Leave A Reply

Your email address will not be published.