The news is by your side.

ಬೆಳಗಾವಿ ಜಿಲ್ಲೆಯಲ್ಲಿ 258 ಜನರಿಗೆ ಸೋಂಕು, 197 ಸೋಂಕಿತರು ಗುಣವಾಗಿ ಮನೆಗೆ

 

ಬೆಳಗಾವಿ : ಜಿಲ್ಲೆಯಲ್ಲಿ ನಿನ್ನೆ ಶುಕ್ರವಾರ ದಿಡೀರ್ ಕುಸಿದಿದ್ದ ಕೊರೋನಾ ಸೋಂಕು ಇಂದು ಪುನಃ ಮೊದಲಿನಂತೆ ಅಬ್ಬರಿಸಿದೆ. ನಿನ್ನೆ 40 ಜನರಲ್ಲಿ ಕಂಡುಬಂದಿದ್ದ ಸೋಂಕು ಇಂದು 258 ಜನರನ್ನು ಆವರಿಸಿಕೊಂಡಿದ್ದು ಮೂವರು ಸೋಂಕಿತರು ಅಸುನೀಗಿದ್ದಾರೆ. ಅಂತೆಯೇ ಇಂದು 197 ಸೋಂಕಿತರು ಗುಣವಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿರುತ್ತಾರೆ.

ಜಿಲ್ಲಾ ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯಂತೆ ಇಂದಿನ ಸೋಂಕಿತರ ಸೇರ್ಪಡೆಯೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ19870 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 2103 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು 9886 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 630516 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 100 ಸೋಂಕಿತರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 9219 ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 21 ಮಹಾಮಾರಿಗೆ ಬಲಿಯಾಗಿದ್ದಾರೆ. ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 9219 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Shree Panjurlli Fine Dine ADD

- Advertisement -

Leave A Reply

Your email address will not be published.