The news is by your side.

ಅಂಗಡಿ ಕುಟುಂಬಕ್ಕೆ ಸಾಂತ್ವನ ಹೇಳಲು ನಾಳೆ ಯಡಿಯೂರಪ್ಪ ಬೆಳಗಾವಿಗೆ

 

ಬೆಂಗಳೂರು : ಇತ್ತೀಚಿಗೆ ಅಸುನೀಗಿದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿಯವರ ಕುಟುಂಬಕ್ಕೆ ಸಾಂತ್ವನ ಹೇಳಲು ನಾಳೆ ಭಾನುವಾರ ಮುಖ್ಯಮಂತ್ರಿ ಯಡಿಯೂರಪ್ಪ ಬೆಳಗಾವಿಗೆ ಆಗಮಿಸಲಿದ್ದಾರೆ.

ದೆಹಲಿಯಲ್ಲಿ ನಡೆದ ಅಂಗಡಿ ಅವರ ಅಂತ್ಯಕ್ರಿಯೆಯಲ್ಲಿ ಯಡಿಯೂರಪ್ಪ ಭಾಗವಹಿಸಲು ಸಾಧ್ಯವಾಗಿರಲಿಲ್ಲ ಹಾಗಾಗಿ ನಾಳೆ ಬಂದು ದುಃಖದಲ್ಲಿರುವ ಕುಟುಂಬವನ್ನು ಸಂತೈಸುವ ಸಾಧ್ಯತೆಯಿದೆ.

ಮುಖ್ಯಮಂತ್ರಿಯವರ ನಾಳಿನ ಕಾರ್ಯಕ್ರಮ ಇನ್ನೂ ಸಿದ್ಧವಾಗಿಲ್ಲವೆಂದು ತಿಳಿದುಬಂದಿದೆ.

Shree Panjurlli Fine Dine ADD

- Advertisement -

Leave A Reply

Your email address will not be published.