Please assign a menu to the primary menu location under menu

National

ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್: ನ್ಯಾಯಬೆಲೆ ಅಂಗಡಿಯಲ್ಲಿ ಮಿನಿ ಸಿಲಿಂಡರ್

ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್: ನ್ಯಾಯಬೆಲೆ ಅಂಗಡಿಯಲ್ಲಿ ಮಿನಿ ಸಿಲಿಂಡರ್

ನವದೆಹಲಿ: ನ್ಯಾಯಬೆಲೆ ಅಂಗಡಿಗಳಲ್ಲಿಯೂ ಸಣ್ಣ LPG ಸಿಲಿಂಡರ್‌ಗಳನ್ನ ಮಾರಾಟ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ನ್ಯಾಯಬೆಲೆ ಅಂಗಡಿಗಳ ಆರ್ಥಿಕತೆ ಹೆಚ್ಚಿಸುವ ಭಾಗವಾಗಿ ಸಣ್ಣ ಎಲ್‌ಪಿಜಿ ಸಿಲಿಂಡರ್‌ಗಳ ಚಿಲ್ಲರೆ ಮಾರಾಟಕ್ಕೆ ಅವಕಾಶ ನೀಡಲು ಮತ್ತು ನ್ಯಾಯಬೆಲೆ ಅಂಗಡಿಗಳ ಮೂಲಕ ಹಣಕಾಸು ಸೇವೆಗಳನ್ನು ನೀಡಲು ಯೋಜಿಸಲಾಗಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ.

ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರಗಳೊಂದಿಗಿನ ಪ್ರತಿನಿಧಿಗಳ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚಿಸಲಾಗಿದೆ. ಎಲೆಕ್ಟ್ರಾನಿಕ್ಸ್ ಮತ್ತು ಐಟಿ, ಹಣಕಾಸು ಮತ್ತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯಗಳ ಪ್ರತಿನಿಧಿಗಳು ಕೂಡ ಸಭೆಯಲ್ಲಿ ಭಾಗವಹಿಸಿದ್ದರು.

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್(ಐಒಸಿಎಲ್), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್(ಬಿಪಿಸಿಎಲ್), ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್(ಹೆಚ್‌ಪಿಸಿಎಲ್) ಹಾಗೂ ಸಿಎಸ್‌ಸಿ ಇ-ಗವರ್ನೆನ್ಸ್ ಸರ್ವೀಸಸ್ ಇಂಡಿಯಾ ಲಿಮಿಟೆಡ್(ಸಿಎಸ್‌ಸಿ) ಅಧಿಕಾರಿಗಳು ಕೂಡ ಸಭೆಯಲ್ಲಿ ಭಾಗಿಯಾಗಿದ್ದರು.

IOCL ಮತ್ತು BPCL ನಂತಹ ತೈಲ ಮಾರುಕಟ್ಟೆ ಕಂಪನಿಗಳ ಪ್ರತಿನಿಧಿಗಳು ಪಡಿತರ ಅಂಗಡಿಗಲ್ಲಿ ಸಣ್ಣ LPG ಸಿಲಿಂಡರ್‌ಗಳ ಚಿಲ್ಲರೆ ಮಾರಾಟ ಮಾಡುವ ಕೇಂದ್ರದ ಪ್ರಸ್ತಾಪವನ್ನು ಶ್ಲಾಘಿಸಿದ್ದಾರೆ.

ಸಭೆಯ ನಂತರ, ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯದ ಹೇಳಿಕೆಯಲ್ಲಿ ನ್ಯಾಯಬೆಲೆ ಅಂಗಡಿಗಳ ಆರ್ಥಿಕ ಕಾರ್ಯಸಾಧ್ಯತೆ ಹೆಚ್ಚಿಸಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸಣ್ಣ ಎಲ್‌ಪಿಜಿ ಸಿಲಿಂಡರ್‌ಗಳನ್ನು ಪಡಿತರ ಅಂಗಡಿಗಳ ಮೂಲಕ ಮಾರುವ ಚಿಲ್ಲರೆ ಮಾರಾಟದ ಯೋಜನೆ ರೂಪಿಸಬೇಕೆಂದು ಹೇಳಲಾಗಿದೆ.

ಬಂಡವಾಳ ವೃದ್ಧಿಗಾಗಿ ಪಡಿತರ ವಿತರಕರಿಗೆ ಮುದ್ರಾ ಸಾಲವನ್ನು ವಿಸ್ತರಿಸಲು ಸರ್ಕಾರ ಯೋಜಿಸುತ್ತಿದೆ. ದೇಶದಲ್ಲಿ ಸುಮಾರು 5.26 ಲಕ್ಷ ನ್ಯಾಯಬೆಲೆ ಅಂಗಡಿಗಳಿದ್ದು, ಅವುಗಳ ಮೂಲಕ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಬಡ ಫಲಾನುಭವಿಗಳಿಗೆ ಸಬ್ಸಿಡಿ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದೆ ಎನ್ನಲಾಗಿದೆ.


Leave a Reply

error: Content is protected !!